ಶಿವಮೊಗ್ಗ:ಕಾರಿನಲ್ಲಿ ತೆರಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದೊಡ್ಡಪೇಟೆ ಪೊಲೀಸರು ಸೆರೆ ಹಿಡಿದಿದ್ದಾರೆ.
ಕಾರಿನಲ್ಲಿ ತೆರಳಿ ಗಾಂಜಾ ಮಾರಾಟ: ಶಿವಮೊಗ್ಗದಲ್ಲಿ ಇಬ್ಬರ ಬಂಧನ - ಗಾಂಜಾ ಮಾರಾಟ ಶಿವಮೊಗ್ಗದಲ್ಲಿ ಇಬ್ಬರ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿನ ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ.
ಕಾರಿನಲ್ಲಿ ತೆರಳಿ ಗಾಂಜಾ ಮಾರಾಟ : ಇಬ್ಬರ ಬಂಧನ
ಸೈಪುಲ್ಲಾ ಖಾನ್ (24) ಹಾಗೂ ಮಹಮದ್ ಖಲೀಲ್ (23) ಬಂಧಿತರು. ಇವರು ಇಲಿಯಾಸ್ ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದುದರ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳಿಂದ 80 ಸಾವಿರ ರೂ ಮೌಲ್ಯದ 2 ಕೆ.ಜಿ 550 ಗ್ರಾಂ ಗಾಂಜಾ, 2 ಮೊಬೈಲ್, 805 ರೂ ನಗದು ಹಾಗೂ ಕಾರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.