ಶಿವಮೊಗ್ಗ:ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಮಕ್ಕಳಿಬ್ಬರು ಸಾವನ್ನಪ್ಪಿರುವ ಘಟನೆ ಸೋಮಿನಕೊಪ್ಪ ಕೆರೆಯಲ್ಲಿ ನಡೆದಿದೆ.
ಶಿವಮೊಗ್ಗ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಮಕ್ಕಳಿಬ್ಬರು ನೀರುಪಾಲು - ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ
ಕೆರೆಯಲ್ಲಿ ಮೀನು ಹಿಡಿಯಲು ಹೋದ ಮಕ್ಕಳಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
![ಶಿವಮೊಗ್ಗ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಮಕ್ಕಳಿಬ್ಬರು ನೀರುಪಾಲು dwsd](https://etvbharatimages.akamaized.net/etvbharat/prod-images/768-512-7479095-thumbnail-3x2-vish.jpg)
ಕೆರೆಯಲ್ಲಿ ಮೀನು ಹಿಡಿಯಲು ಹೋದ ಮಕ್ಕಳಿಬ್ಬರು ನೀರು ಪಾಲು
ಪೂಜಾ (10) ಹಾಗೂ ಮಾಲತೇಶ(9) ಮೃತಪಟ್ಟ ಮಕ್ಕಳು. ಕೆರೆಯಲ್ಲಿ ಗ್ರಾಮಸ್ಥರು ಮೀನು ಹಿಡಿಯುತ್ತಿದ್ದರು. ಇದನ್ನು ನೋಡಿದ ಮಕ್ಕಳು ತಾವೂ ಸಹ ಮೀನು ಹಿಡಿಯಲು ಕೆರೆಗೆ ಇಳಿದಿದ್ದಾರೆ.
ಈ ವೇಳೆ ಈ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಮಕ್ಕಳ ಶವಗಳನ್ನು ಮೇಲಕ್ಕೆತ್ತಿದ್ದಾರೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.