ಕರ್ನಾಟಕ

karnataka

ETV Bharat / state

ಸಿಎಂ ತವರು ಜಿಲ್ಲೆಯಲ್ಲಿ ಕೊರೊನಾಕ್ಕೆ ಮತ್ತೆರಡು ಬಲಿ: ಮೃತ ಸಂಖ್ಯೆ 10ಕ್ಕೆ ಏರಿಕೆ - ಶಿವಮೊಗ್ಗದಲ್ಲಿ ಕೊರೊನಾಗೆ ಇಬ್ಬರು ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ವೈರಸ್​​​​​ಗೆ ಇಂದು ಇಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

Shivmogga
Shivmogga

By

Published : Jul 11, 2020, 1:32 PM IST

ಶಿವಮೊಗ್ಗ: ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆ ಸಹ ಏರಿಕೆಯಾಗುತ್ತಿದೆ. ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ.

ಭದ್ರಾವತಿ ಹಾಗೂ ಶಿವಮೊಗ್ಗದ ನಗರದ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಶಿವಮೊಗ್ಗದ ಗಾಂಧಿ ಬಜಾರ್​​​ನ ನಿವಾಸಿಯಾದ 80 ವರ್ಷದ ವೃದ್ಧರೊಬ್ಬರನ್ನು ಕಳೆದ ವಾರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.

ಭದ್ರಾವತಿಯ 42 ವರ್ಷದ ವ್ಯಕ್ತಿ ಅನಾರೋಗ್ಯದ ಹಿನ್ನೆಲೆ ಜುಲೈ 9 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಸಹ ಚಿಕಿತ್ಸೆ ಫಲಕಾರಿಯಾಗದೇ ತೀವ್ರ ಜ್ವರದಿಂದ ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಆದರೆ ಸರ್ಕಾರಿ ದಾಖಲೆಗಳ ಪ್ರಕಾರ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 4 ಎಂದು ತೋರಿಸಲಾಗುತ್ತಿದೆ.

ABOUT THE AUTHOR

...view details