ಶಿವಮೊಗ್ಗ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು, ಇಂದು ಸಹ ಶಿವಮೊಗ್ಗದ ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಶಿವಮೊಗ್ಗದಲ್ಲಿ ಕೊರೊನಾಗೆ ಮತ್ತಿಬ್ಬರು ಬಲಿ: ಸಾವಿನ ಸಂಖ್ಯೆ 14ಕ್ಕೆ ಏರಿಕೆ - Shivmogga corona death news
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಕೊರೊನಾಗೆ ಮತ್ತಿಬ್ಬರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಒಟ್ಟು 14ಕ್ಕೆ ಏರಿಕೆ ಆಗಿದೆ.
Shivmogga
ಶಿವಮೊಗ್ಗದ ಟಿಪ್ಪು ನಗರದ ನಿವಾಸಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಬಿರೂರಿನ ನಿವಾಸಿ ಸಾವನ್ನಪ್ಪಿದ್ದಾರೆ. ಈ ಇಬ್ಬರು ಸೋಂಕಿತ ಮಹಿಳೆಯರು ಕಳೆದ ನಾಲ್ಕು ದಿನದ ಹಿಂದೆ ಅನಾರೋಗ್ಯದ ಹಿನ್ನೆಲೆ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಮೃತರ ಶವಗಳನ್ನು ಕೋವಿಡ್ ಮಾರ್ಗಸೂಚಿಯಂತೆ ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 14 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ.