ಶಿವಮೊಗ್ಗ:ಶಿವಮೊಗ್ಗ ನಗರದ ಸ್ವಾಮಿ ವಿವೇಕಾನಂದ ಬಡಾವಣೆ ಹಾಗೂ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಹಳ್ಳೂರು ಹಕ್ಕಲು ಬಡಾವಣೆಯನ್ನು ಸೀಲ್‌ಡೌನ್ ಮಾಡಲಾಗಿದೆ.
ಶಿವಮೊಗ್ಗದ ಸ್ವಾಮಿ ವಿವೇಕಾನಂದ ಬಡಾವಣೆಯ ಓರ್ವ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅದೇ ರೀತಿ ಹಳ್ಳೂರು ಹಕ್ಕಲಿಗೆ ನಿನ್ನೆ ಬೆಂಗಳೂರಿನಿಂದ ಆಗಮಿಸಿದ್ದ ಮಹಿಳೆಯಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದ ಹಿನ್ನೆಲೆ ಸೀಲ್‌ಡೌನ್ ಮಾಡಲಾಗಿದೆ.