ಶಿವಮೊಗ್ಗ : ಏಪ್ರಿಲ್ 1 ರಂದು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ದೆಹಲಿಯಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ದೇಶದ ಶಿಕ್ಷಣ ತಜ್ಞರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ನಾಳೆ ಪ್ರಧಾನಿ ಜೊತೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ.. ಶಿವಮೊಗ್ಗದಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆ - ನಾಳೆಯಿಂದ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಶಿವಮೊಗ್ಗದಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆ
ನಾಳೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ದೆಹಲಿಯಲ್ಲಿ ನಡೆಯಲಿದ್ದು, ರಾಜ್ಯದಿಂದ ಆಯ್ಕೆಯಾಗಿರುವ 60 ವಿದ್ಯಾರ್ಥಿಗಳ ಪೈಕಿ ಶಿವಮೊಗ್ಗದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಶಿವಮೊಗ್ಗದಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆ
ಐದನೇ ಆವೃತ್ತಿ ಯ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಶಿವಮೊಗ್ಗದಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕೇಂದ್ರಿಯ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿಗಳಾದ ಅಕ್ಷಯ್ ಹಾಗೂ ತನುಶ್ರೀ ಆಯ್ಕೆ ಆಗಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ 60 ವಿದ್ಯಾರ್ಥಿಗಳ ಪೈಕಿ ಶಿವಮೊಗ್ಗದ ಇಬ್ಬರು ವಿದ್ಯಾರ್ಥಿಗಳು ಸೇರಿರುವುದು ವಿಶೇಷ. ಈ ಬಗ್ಗೆ ಮಾತನಾಡಿದ ವಿದ್ಯಾರ್ಥಿ ಅಕ್ಷಯ್ ತುಂಬಾ ಸಂತಸ ಆಗುತ್ತಿದೆ ಎಂದು ತಮ್ಮ ಅಭಿಪ್ರಾಯವನ್ನು 'ಈಟಿವಿ ಭಾರತ'ದೊಂದಿಗೆ ಹಂಚಿಕೊಂಡಿದ್ದಾರೆ.