ಶಿವಮೊಗ್ಗ/ಚಾಮರಾಜನಗರ: ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಚೆಕ್ ಪೋಸ್ಟ್ಗಳಲ್ಲಿ ತಪಾಸಣೆ ವೇಳೆ ಸೂಕ್ತ ದಾಖಲೆ ಇಲ್ಲದ ಲಕ್ಷಾಂತರ ರೂ. ಮೌಲ್ಯದ ದೋಸೆ ತವಾ ಸೇರಿದಂತೆ ದಿನಸಿ ಪದಾರ್ಥಗಳನ್ನು ವಶಕ್ಕೆ ಪಡೆಯಲಾಗಿದೆ. ಆಗುಂಬೆ ಠಾಣಾ ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದೆ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ 29.70 ಲಕ್ಷ ರೂ ಮೌಲ್ಯದ ಒಟ್ಟು 1,100 ನಾನ್ ಸ್ಟಿಕ್ ದೋಸೆ ತವಾಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ 8 ಲಕ್ಷ ರೂ ಮೌಲ್ಯದ ಒಟ್ಟು 30 ಟನ್ ತೂಕದ ಬೇಳೆ, ರವೆ, ಗೋಧಿ ಮತ್ತು ಇತರೆ ಆಹಾರ ಸಾಮಗ್ರಿಗಳು ತುಂಬಿದ್ದ ಸಾವಿರ ಬ್ಯಾಗ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡಿರುವ ವಸ್ತುಗಳು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ 7 ಲಕ್ಷ ರೂ ಮೌಲ್ಯದ ಒಟ್ಟು 10 ಟನ್ 504 ಕೆ.ಜಿ ತೂಕದ ಅಕ್ಕಿ ತುಂಬಿದ್ದ 404 ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಗ್ರಹಿಸಿಟ್ಟಿದ್ದ ಅಂದಾಜು ಮೌಲ್ಯ 10 ಲಕ್ಷ ರೂ ಮೌಲ್ಯದ ಬಟ್ಟೆ, ಸೀರೆ, ಇಡ್ಲಿ ಕುಕ್ಕರ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡಿರುವ ವಸ್ತುಗಳು ಅಕ್ರಮ ಮದ್ಯ ವಶ: ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಇಲಾಖೆ ಮೇಲೆ ದಾಳಿ ನಡೆಸಿದೆ. 17,507 ರೂ. ಮೌಲ್ಯದ 25 ಲೀಟರ್ 608 ಮಿಲಿ ಅಕ್ರಮ ಮದ್ಯವನ್ನು ವಶಕ್ಕೆ ಪಡಿಸಿಕೊಳ್ಳಲಾಗಿದೆ. ಆರೋಪಿತರ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆಯಡಿಯಲ್ಲಿ ಒಟ್ಟು 8 ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಸೀರೆ, ಬ್ಯಾಗ್, ಬೆಡ್ ಶೀಟ್ ಜಪ್ತಿ:ಚಾಮರಾಜನಗರ ಜಿಲ್ಲೆಯ ಹನೂರು ಹಾಗೂ ಕೊಳ್ಳೇಗಾಲದಲ್ಲಿ ಹಂಚಲು ದಾಸ್ತಾನು ಮಾಡಲಾಗಿದ್ದ ಸೀರೆ, ಸ್ಕೂಲ್ ಬ್ಯಾಗ್ ಹಾಗೂ ಬೆಡ್ ಶೀಟ್ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಮನೆಯೊಂದರಲ್ಲಿ ಚುನಾವಣಾ ಸಂಬಂಧ ಸೀರೆ ಹಂಚುವ ಉದ್ದೇಶದಿಂದ ದಾಸ್ತಾನಿಟ್ಟ ಖಚಿತ ಮಾಹಿತಿ ಮೇರೆಗೆ ಸಹಕಾರ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ 45 ಸೀರೆಗಳನ್ನು ವಶಕ್ಕೆ ಪಡೆದಿದ್ದಾರೆ. ಖರೀದಿಸಲು ಹಾಗೂ ದಾಸ್ತಾನಿಡಲು ಯಾವುದೇ ಪರವಾನಗಿ ಇಲ್ಲದಿದ್ದರಿಂದ ರಾಜಶೇಖರ್ ಮೂರ್ತಿ ಎಂಬವರ ಮೇಲೆ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಶಪಡಿಸಿಕೊಂಡಿರುವ ವಸ್ತುಗಳು ಹನೂರು ಪಟ್ಟಣದ ಶ್ರೀರಂಗ ಏಜೆನ್ಸಿಸ್ ಗೋದಾಮಿನ ಮೇಲೆ ಪ.ವರ್ಗ ಕಲ್ಯಾಣಾಧಿಕರಿಗಳು ಹಾಗೂ ಪೊಲೀಸರು ದಾಳಿ ಮಾಡಿ ಹಂಚಲಿಟ್ಟಿದ್ದ 1700 ಜೊತೆ ಶೂಗಳು, 2 ಚೀಲ ಟವೆಲ್ಗಳು, 630 ಶಾಲಾ ಬ್ಯಾಗ್ ಹಾಗೂ 15 ಉಲ್ಲನ್ ಬೆಡ್ ಶೀಟ್ಗಳನ್ನು ಜಪ್ತಿ ಮಾಡಿದ್ದಾರೆ.
ಇದನ್ನೂ ಓದಿ:ಧಾರವಾಡ: ದಾಖಲೆ ಇಲ್ಲದ ₹53 ಲಕ್ಷ ಹಣ, ಕಾರು ಸೀಜ್