ಶಿವಮೊಗ್ಗ: ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಗಿತಗೊಳಿಸಿ ವೈಜ್ಞಾನಿಕ ಗುಣಮಟ್ಟದಲ್ಲಿ ಕಾಮಗಾರಿಯನ್ನು ಮುಂದುವರಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಇಲ್ಯಾಜ್ ನಗರದ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಗಿತಗೊಳಿಸಲು ಆಗ್ರಹಿಸಿ ಪ್ರತಿಭಟನೆ
ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಗಿತಗೊಳಿಸಿ ವೈಜ್ಞಾನಿಕ ಗುಣಮಟ್ಟದಲ್ಲಿ ಕಾಮಗಾರಿಯನ್ನು ಮುಂದುವರಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಇಲ್ಯಾಜ್ ನಗರದ ನಿವಾಸಿಗಳು ಪ್ರತಿಭಟನೆ ನಡೆಸಿದರು.
ನಗರದ ನ್ಯೂ ಮಂಡ್ಲಿಯಿಂದ ಗೋಪಾಲ ನಗರಕ್ಕೆ ಹೋಗುವ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಆದರೆ ಇದು ಅವೈಜ್ಞಾನಿಕವಾಗಿದೆ. ಒಳಚರಂಡಿ ಕಾಮಗಾರಿ ಎಸ್ಟಿಮೇಟ್ ಮತ್ತು ಪ್ಲ್ಯಾನನ್ನು ತೋರಿಸುತ್ತಿಲ್ಲ. ಚರಂಡಿ ಕಾಮಗಾರಿಯ ಅಳತೆ ಕೂಡ ಸರಿ ಇಲ್ಲ. ಅವೈಜ್ಞಾನಿಕವಾಗಿ ಡಿವೈಡರ್ ಹಾಕಲಾಗಿದೆ. ಇದರಿಂದ ಖಾಸಗಿ ಕಟ್ಟಡಗಳ ಮಾಲೀಕರಿಗೆ ಗೊಂದಲ ಉಂಟಾಗಿದೆ ಎಂದು ಆರೋಪಿಸಿದರು.
ಕಾಮಗಾರಿಯಲ್ಲಿ ಒಂದು ಕಡೆ 58 ಅಡಿ ಇದ್ದರೆ, ಮತ್ತೊಂದು ಕಡೆ 42 ಅಡಿ ಜಾಗ ಬಿಟ್ಟಿದ್ದಾರೆ. ಕಟ್ಟಡದಿಂದ ಕಟ್ಟಡಕ್ಕೆ ಜಾಗವನ್ನು ಬಿಟ್ಟು ಕಟ್ಟಡಗಳನ್ನು ಕಟ್ಟಿಕೊಂಡಿರುವ ಮಾಲೀಕರಿಗೆ ಗುರುತಿಸಿದ್ದಾರೆ. ಆದ್ದರಿಂದ ತಕ್ಷಣವೇ ಮಾಲೀಕರಿಗೆ ಯಾವುದೇ ನಷ್ಟವಾಗದಂತೆ ವೈಜ್ಞಾನಿಕ ಗುಣಮಟ್ಟದಲ್ಲಿ ಕಾಮಗಾರಿಯನ್ನು ಮುಂದುವರಿಸಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.