ಶಿವಮೊಗ್ಗ: ಮೂವರು ಸಚಿವರಿರುವ ಕಾರ್ಯಕ್ರಮದಲ್ಲಿ ಕುಳಿತುಕೊಳ್ಳಲು ಚೇರ್ ಇಲ್ಲವೆಂದು ನೆಲದ ಮೇಲೆ ಕುಳಿತು ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು .
ಶಿವಮೊಗ್ಗ: ಚೇರ್ ಇಲ್ಲವೆಂದು ನೆಲದ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಪಾಲಿಕೆ ಕಾಂಗ್ರೆಸ್ ಸದಸ್ಯರು - ಕಾಂಗ್ರೆಸ್ ಸದಸ್ಯರ ಪ್ರತಿಭಟನೆ ಶಿವಮೊಗ್ಗ
ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಾಲಿಕೆ ಸದಸ್ಯರನ್ನು ಒಳಗಡೆ ಬಿಟ್ಟಿಲ್ಲ ಹಾಗೂ ಕುಳಿತುಕೊಳ್ಳಲು ಚೇರ್ ಇಲ್ಲವೆಂದು ಕೆಳಗಡೆ ಕೂತು ಸದಸ್ಯರು ಪ್ರತಿಭಟನೆ ನಡೆಸಿದರು.
ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಮಹಾನಗರ ಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಾಲಿಕೆ ಸದಸ್ಯರನ್ನು ಒಳಗಡೆ ಬಿಟ್ಟಿಲ್ಲ ಹಾಗೂ ಕುಳಿತುಕೊಳ್ಳಲು ಚೇರ್ ಇಲ್ಲವೆಂದು ಕೆಳಗಡೆ ಕೂತು ಪ್ರತಿಭಟನೆ ನಡೆಸಿದರು.
ಪೊಲೀಸರು ಹಾಗೂ ಜಿಲ್ಲಾಧಿಕಾರಿಗಳು ಮನವೊಲಿಸಿದರೂ ಕೇಳದ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸಿದರು. ಇನ್ನು ಈ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎಸ್ ಈಶ್ವರಪ್ಪ, ಬಿ.ಎ ಬಸವರಾಜ, ಎಸ್.ಟಿ ಸೋಮಶೇಖರ್, ಸಂಸದ ಬಿ.ವೈ ರಾಘವೇಂದ್ರ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಉಪಸ್ಥಿತರಿದ್ದರು.