ಕರ್ನಾಟಕ

karnataka

ETV Bharat / state

ಶಿವಮೊಗ್ಗ: 'ಅತಿಥಿ ಉಪನ್ಯಾಸಕ'ರಿಗೆ ಉದ್ಯೋಗ ಭದ್ರತೆ ನೀಡುವಂತೆ ವಿವಿಧ ಸಂಘಟನೆಗಳಿಂದ ಒತ್ತಾಯ - ಶಿವಮೊಗ್ಗ ಸುದ್ದಿ 2020

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಪಡಿಸಿ ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸಬೇಕು. ಹಾಗೂ ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಬೇಕು ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

Various organizations demand job security for guest lecturers in shimoga
ಅತಿಥಿ ಉಪನ್ಯಾಸಕ'ರಿಗೆ ಉದ್ಯೋಗ ಭದ್ರತೆ ನೀಡುವಂತೆ ವಿವಿಧ ಸಂಘಟನೆಗಳಿಂದ ಒತ್ತಾಯ

By

Published : Sep 8, 2020, 4:46 PM IST

ಶಿವಮೊಗ್ಗ: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಪಡಿಸಿ, ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಮತ್ತು ಲಾಕ್ ಡೌನ್ ಅವಧಿಯ ವೇತನವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ವತಿಯಿಂದ ಅತಿಥಿ ಉಪನ್ಯಾಸಕರಿಗೆ ಬೆಂಬಲ ಸೂಚಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಅತಿಥಿ ಉಪನ್ಯಾಸಕ'ರಿಗೆ ಉದ್ಯೋಗ ಭದ್ರತೆ ನೀಡುವಂತೆ ವಿವಿಧ ಸಂಘಟನೆಗಳಿಂದ ಒತ್ತಾಯ

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಾತನಾಡಿದ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿಯ ರಾಜ್ಯಾಧ್ಯಕ್ಷರಾದ ಸೋಮಶೇಖರ್​, ಹತ್ತಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರು ಇಂದು ಸಂಕಷ್ಟಕ್ಕೆ ಸಿಲುಕಿದ್ದಾರೆ.ಕೊರೊನಾ ಮಹಾಮಾರಿಯಿಂದ ಕೆಲಸವು ಇಲ್ಲದೇ, ವೇತನವು ಇಲ್ಲದೇ, ಕುಟುಂಬ ನಿರ್ವಹಣೆ ಹೊರೆ ಆಗುತ್ತಿದೆ. ಹಾಗಾಗಿ ಸರ್ಕಾರ ಲಾಕ್ ಡೌನ್ ಅವಧಿಯನ್ನು ಸೇವಾ ಅವಧಿಯೆಂದು ಪರಿಗಣಿಸಿ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ನಂತರ ಮಾತು ಮುಂದುವರೆಸಿ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಪಡಿಸಿ ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸಬೇಕು. ಹಾಗೂ ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಬೇಕು ಹೀಗೆ ವಿವಿಧ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದರು.

ನಮ್ಮ ಬೇಡಿಕೆಗಳನ್ನು ಸರ್ಕಾರ ಲಘುವಾಗಿ ಪರಿಗಣಿಸದೆ ಸಮಸ್ಯೆ ಗೆ ಸ್ಪಂದಿಸಬೇಕು. ಇಲ್ಲವಾದರೆ ಬೆಂಗಳೂರು ಚಲೋ ಹೋರಾಟ ಮಾಡಲಾಗುವುದು ಎಂದು ವಿವಿಧ ಸಂಘಟನೆಗಳು ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದರು.

ABOUT THE AUTHOR

...view details