ಕರ್ನಾಟಕ

karnataka

ETV Bharat / state

ಮತೀಯ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ - ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಮತೀಯ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

Protest in Shimoga
ಶಿವಮೊಗ್ಗದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

By

Published : Aug 13, 2020, 3:04 PM IST

ಶಿವಮೊಗ್ಗ: ಮತೀಯ ಸಂಘಟನೆಗಳಾದ ಎಸ್​​ಡಿಪಿಐ ಹಾಗೂ ಪಿಎಫ್​​ಐ ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಮಾತೃ ಮಂಡಳಿ ದುರ್ಗಾ ವಾಹಿನಿ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಶಿವಮೊಗ್ಗದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿಯಲ್ಲಿ ನಡೆದ ಹಿಂಸಾಚಾರದಲ್ಲಿ ಐಎಸ್​​ಐ ಸಂಘಟನೆಯ ಕೈವಾಡವಿದೆ. ದೇಶದ ಭದ್ರತೆಯನ್ನು ಐಎಸ್ಐ ಹಾಳು ಮಾಡುತ್ತಿದ್ದರೆ. ಎಸ್​​ಡಿಪಿಐ ದೇಶದ ಒಳಗಡೆ ಹಿಂಸಾತ್ಮಕ ಕೃತ್ಯಗಳನ್ನು ನಡೆಸುತ್ತಿದೆ. ಹಾಗಾಗಿ ಎಸ್​​ಡಿಪಿಐ ಹಾಗೂ ಪಿಎಫ್​​ಐ ಸಂಘಟನೆಗಳನ್ನು ಕೂಡಲೇ ಸರ್ಕಾರ ನಿಷೇಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ABOUT THE AUTHOR

...view details