ಶಿವಮೊಗ್ಗ: ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ನಂತರ ತಮ್ಮ ನಾಯಕತ್ವದ ಪರೀಕ್ಷೆ ನಡೆಸಿಕೊಳ್ಳಲು ಮೇಕಾದಾಟು ಪಾದಯಾತ್ರೆ ಕೈಗೊಂಡಿದ್ದರು. ಅದಕ್ಕೆ ಸಹಜವಾಗಿ ಸಿದ್ದರಾಮಯ್ಯನವರು ಸಿದ್ದರಾಮೋತ್ಸವದ ಮೂಲಕ ಪ್ರತ್ಯುತ್ತರವನ್ನು ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಕಾಂಗ್ರೆಸ್ ನಲ್ಲಿ ಹಗ್ಗ ಜಗ್ಗಾಟ ಮುಂದುವರೆದಿದೆ. ಆದರೆ, ಮುಂದೆ ಕಾಂಗ್ರೆಸ್ ನಲ್ಲಿ ಯಾವ ರೀತಿಯ ಪ್ರತಿಕ್ರಿಯೆ ಇರುತ್ತದೆ ಎಂದು ತಮಗೆ ಗೊತ್ತಾಗುತ್ತದೆ. ಕಾಂಗ್ರೆಸ್ನಲ್ಲಿ ಆಂತರಿಕ ಕಲಹ ಇದೆ. ಕಾಂಗ್ರೆಸ್ ಬಗ್ಗೆ ಬಿಜೆಪಿ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಬಿಜೆಪಿಯು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದೆ. ನಾವು ಚುನಾವಣೆಯಲ್ಲಿ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯ ಮುಂದಿಟ್ಟುಕೊಂಡು ಹೋಗುತ್ತೇವೆ ಎಂದರು.
ಡಿಕೆಶಿ ಮೇಕೆದಾಟು ಪಾದಯಾತ್ರೆಗೆ ಟಾಂಗ್ ಕೊಡಲು ಸಿದ್ದರಾಮೋತ್ಸವ: ಬಿ.ವೈ. ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ : ಶಿಕಾರಿಪುರದಿಂದ ಸ್ಪರ್ಧೆ ಮಾಡುವ ಕುರಿತು ಯಡಿಯೂರಪ್ಪನವರು ತಿಳಿಸಿದ್ದಾರೆ. ಹಿಂದೆ ಶಿಕಾರಿಪುರ ಕಾರ್ಯಕರ್ತರ ಮುಂದೆ ಯಡಿಯೂರಪ್ಪನವರು ತಾವು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದಾಗ ನಿಮ್ಮ ಎರಡನೇ ಪುತ್ರ ವಿಜಯೇಂದ್ರರನ್ನು ಸ್ಪರ್ಧೆಗೆ ಇಳಿಸಬೇಕು ಎಂದು ತಿಳಿಸಿದ್ದರು. ಕಾರ್ಯಕರ್ತರ ಒತ್ತಡಕ್ಕೆ ಮಣಿದು ಬಿಎಸ್ವೈ ಹಾಗೆ ಹೇಳಿದ್ದಾರೆ. ಇದರ ಬಗ್ಗೆ ನಾನು ಈಗಲೂ ಹೇಳುತ್ತೆನೆ. ಪಕ್ಷ ಹಾಗೂ ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ತಾವು ಬದ್ದನಾಗಿರುತ್ತೇವೆ ಎಂದು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ:ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣಕ್ಕೆ ಮಾಡುತ್ತೇವೆ, ಆದ್ರೆ ಗಣೇಶ ಹಬ್ಬಕ್ಕಿಲ್ಲ ಅವಕಾಶ: ಶಾಸಕ ಜಮೀರ್