ಕರ್ನಾಟಕ

karnataka

ETV Bharat / state

ಮುಂದಿನ ಚುನಾವಣೆಯಲ್ಲಿ ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ: ಮಗನಿಗೆ ಕ್ಷೇತ್ರ ಬಿಟ್ಟುಕೊಟ್ಟ ಮಾಜಿ ಸಿಎಂ - Etv Bharat Kannada

ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

Vijayendra will contest from shikaripura; BSY
Vijayendra will contest from shikaripura; BSY

By

Published : Jul 22, 2022, 2:40 PM IST

Updated : Jul 22, 2022, 3:08 PM IST

ಶಿವಮೊಗ್ಗ:ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಕ್ಷೇತ್ರ ಬಿಟ್ಟುಕೊಡುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಘೋಷಣೆ ಮಾಡಿದರು. ಈ ಮೂಲಕ ಈವರೆಗೆ ಕ್ಷೇತ್ರದ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಶಿಕಾರಿಪುರದ ಅಂಜನಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ನಾನು ಶಿಕಾರಿಪುರದಿಂದ ಸ್ಪರ್ಧಿಸುವುದಿಲ್ಲ. ವಿಜಯೇಂದ್ರ ಅವರೇ ಸ್ಪರ್ಧಿಸುತ್ತಾರೆ. ನನಗಿಂತ ಹೆಚ್ಚು ಅಂತರದಲ್ಲಿ ಗೆಲ್ಲಿಸಿಕೊಡಬೇಕೆಂದು ಶಿಕಾರಿಪುರದ ಜನರಲ್ಲಿ ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿಕೊಂಡರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಮೈಸೂರು ಭಾಗದಲ್ಲಿಯೂ ಸಹ ಸ್ಪರ್ಧಿಸುವಂತೆ ಕೂಗು ಕೇಳಿ ಬಂದಿತ್ತು. ನಾನು ಕ್ಷೇತ್ರ ಖಾಲಿ ಮಾಡುತ್ತಿರುವುದರಿಂದ ವಿಜಯೇಂದ್ರ ಶಿಕಾರಿಪುರದಲ್ಲೇ ನಿಲ್ಲುತ್ತಾರೆ ಎಂದರು.

ಇನ್ನೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ತಿರ್ಮಾನಿಸುತ್ತಾರೆ. ಆರೋಪದಿಂದ ಮುಕ್ತರಾಗಿ ಹೊರಬಂದ ದಿನವೇ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದೇನೆ ಎಂದರು.

ಇದನ್ನೂ ಓದಿ: 'ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ' ಎಂದು ಘೋಷಣೆ ಕೂಗಿದ ಕಾಂಗ್ರೆಸ್​ ಕಾರ್ಯಕರ್ತರು

Last Updated : Jul 22, 2022, 3:08 PM IST

ABOUT THE AUTHOR

...view details