ಶಿವಮೊಗ್ಗ:ಕೋವಿಡ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಬಲಿಯಾಗಿದ್ದಾರೆ.
ಕೊರೊನಾಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಲಿ - ಕೊರೊನಾದಿಂದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸಾವು
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್(42) ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

death
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್(42) ಮೃತ ದುರ್ದೈವಿ. ಶ್ರೀನಿವಾಸ್ ಕಳೆದ ನಾಲ್ಕು ದಿನಗಳಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇವರು ಇತ್ತೀಚಿಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿ, ಅಧ್ಯಕ್ಷರಾಗಿದ್ಧರು. ಶ್ರೀನಿವಾಸ್ ಸಾವಿಗೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.