ಕರ್ನಾಟಕ

karnataka

ETV Bharat / state

ಬಜೆಟ್​​ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಕನಿಷ್ಠ 2 ಸಾವಿರ ಕೋಟಿ ರೂ. ಮೀಸಲಿಡಬೇಕು: ಅಬ್ದುಲ್ ಘನಿ - Shivamogga

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಈ ಬಾರಿಯ ಬಜೆಟ್​​ನಲ್ಲಿ ಕನಿಷ್ಠ 2 ಸಾವಿರ ಕೋಟಿ ಅಷ್ಟಾದರೂ ಅನುದಾನವನ್ನು ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಮೀಸಲಿಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಅಬ್ದುಲ್ ಘನಿ ಮನವಿ ಮಾಡಿದ್ದಾರೆ.

Waqf Board President Abdul Ghani appeals to  CM
ವಕ್ಫ್ ಬೋರ್ಡ್ ಅಧ್ಯಕ್ಷ ಅಬ್ದುಲ್ ಘನಿ ಸುದ್ದಿಗೋಷ್ಟಿ

By

Published : Feb 27, 2021, 8:19 AM IST

ಶಿವಮೊಗ್ಗ: ಈ ಬಾರಿಯ ಬಜೆಟ್​​ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಕನಿಷ್ಠ 2 ಸಾವಿರ ಕೋಟಿ ರೂ. ಮೀಸಲಿಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಅಬ್ದುಲ್ ಘನಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಶುಕ್ರವಾರ ಮಾಧ್ಯಗೋಷ್ಟಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿದಾಗಿನಿಂದಲೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚಿನ ಹಣವನ್ನು ಬಿಡುಗಡೆ ಮಾಡುತ್ತಿದ್ದಾರೆ. ಹಾಗೆಯೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದ ಸಂದರ್ಭದಲ್ಲಿ 900 ಕೋಟಿ ರೂ. ಹಣವನ್ನು ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಡಿದ್ದರು.

ಹಾಗಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಈ ಬಾರಿಯ ಬಜೆಟ್​​ನಲ್ಲಿ ಕನಿಷ್ಠ 2 ಸಾವಿರ ಕೋಟಿ ಅಷ್ಟಾದರೂ ಅನುದಾನವನ್ನು ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಮೀಸಲಿಡಬೇಕು ಎಂದು ಮನವಿ ಮಾಡಿದರು.

ABOUT THE AUTHOR

...view details