ಶಿವಮೊಗ್ಗ: ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಇಂದು ಜಿಲ್ಲೆಯ ಸೋಗಾನೆ ಗ್ರಾಮದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಕಾಮಗಾರಿ ವೀಕ್ಷಣೆ ಮಾಡಿದರು.
ಸಚಿವ ಈಶ್ವರಪ್ಪರಿಂದ ನರೇಗಾ ಕಾಮಗಾರಿ ವೀಕ್ಷಣೆ... ಆದರೆ...?
ಶಿವಮೊಗ್ಗ ಜಿಲ್ಲೆಯ ಸೋಗಾನೆ ಗ್ರಾಮದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿ ವೀಕ್ಷಣೆ ಮಾಡಿದರು.
ಸೋಗಾನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಗಸನಕಟ್ಟೆ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿ ನಡೆಸಲಾಗುತ್ತಿತ್ತು. ಈ ವೇಳೆ, ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿ, ಎಷ್ಟು ಜನ ಕಾಮಗಾರಿ ನಡೆಸುತ್ತಿದ್ದಾರೆ, ಎಷ್ಟು ದಿನಗಳು ಬೇಕಾಗುತ್ತದೆ. ಕೆರೆಯ ಹೂಳನ್ನು ಯಾರು, ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಪಿಡಿಒ ಅವರಿಂದ ಮಾಹಿತಿ ಪಡೆದುಕೊಂಡರು.
ನರೇಗಾ ಕಾಮಗಾರಿ ನಡೆಯುವ ವೇಳೆ ಕಾಮಗಾರಿಗೆ ಬಂದವರಿಗೆ ಸಚಿವರು ಕೋವಿಡ್-19 ಬಗ್ಗೆ ಅರಿವು ಮೂಡಿಸುವ ಪ್ರತಿಜ್ಞಾ ವಿಧಿ ಬೋಧಿಸಿದರು. ಆದರೆ, ಸಚಿವರು ಗ್ರಾಮಾಂತರ ಶಾಸಕ ಅಶೋಕ ನಾಯ್ಕ, ಜಿ.ಪಂ ಉಪಾಧ್ಯಕ್ಷೆ ವೇದಾ ವಿಜಯ ಕುಮಾರ್, ಜಿ.ಪಂ ಸಿಇಒ ವೈಶಾಲಿ, ಹಾಪಕಾಮ್ಸ್ ಅಧ್ಯಕ್ಷ ವಿಜಯ ಕುಮಾರರನ್ನು ಸಾಮಾಜಿಕ ಅಂತರ ಪಾಲಿಸದೇ ಪಕ್ಕದಲ್ಲಿಯೇ ನಿಲ್ಲಿಸಿಕೊಂಡಿದ್ದು ಕಂಡು ಬಂತು.