ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ಶಿವಮೊಗ್ಗ:ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಜ.10 ರಿಂದ ಮತ್ತು ಬಲದಂಡೆ ನಾಲೆಗೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಐಸಿಸಿ ನೀರು ಸಲಹಾ ಸಮಿತಿಯ ಅಧ್ಯಕ್ಷ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಐಸಿಸಿ ನೀರು ಸಲಹಾ ಸಮಿತಿ ಸಭೆ ಈಗ ಚಳಿಗಾಲ ಮತ್ತು ಸ್ವಲ್ಪ ಮಳೆಯಾಗಿರುವುದರಿಂದ ನೆಲದಲ್ಲಿ ತೇವಾಂಶ ಇದೆ. ಎಡದಂಡ ನಾಲೆಗೆ ಜ.10 ರಿಂದ ನೀರು ಹರಿಸಲಾಗುತ್ತಿದ್ದು, ಆನ್ ಮತ್ತು ಆಫ್ ಮಾದರಿ ಅನುಸರಿಸಲಾಗುವುದು. ಜ.10 ರಿಂದ 16 ದಿನ ಆನ್ ಮತ್ತು 15 ದಿನ ಆಫ್, ನಂತರ 17 ದಿನ ಆನ್, 15 ದಿನ ಆಫ್, 18 ದಿನ ಆನ್ 15 ದಿನ ಆಫ್ ಮತ್ತು 20 ದಿನ ಆನ್, 15 ದಿನ ಆಫ್ ಇರುತ್ತದೆ. ಬಲದಂಡ ನಾಲೆಗೆ ಜ.20 ರಿಂದ ನೀರು ಹರಿಸಲಾಗುತ್ತಿದ್ದು, ಮೊದಲಿಗೆ 12 ದಿನ ಆನ್, 20 ದಿನ ಆಫ್, 12 ದಿನ ಆನ್ 20 ದಿನ ಆಫ್, 14 ದಿನ ಆನ್ 20 ದಿನ ಆಫ್ ಮತ್ತು 15 ದಿನ ಆನ್ 20 ದಿನ ಆಫ್ ಇರುತ್ತದೆ ಎಂದರು.
ತುಂಗಾ ದಿಂದ ನೀರು ಲಿಫ್ಟ್ ಮಾಡಲು ಇರುವ ಅಡೆತಡೆಗಳ ಬಗ್ಗೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು. ನಮ್ಮ ಮೊದಲ ಆದ್ಯತೆ ಕುಡಿಯುವ ನೀರು, ಎರಡನೇ ಆದ್ಯತೆ ಬೆಳೆಗಳಿಗೆ. ಇದರಿಂದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆ ರೈತ ಮುಖಂಡರು, ಶಾಸಕರುಗಳ ಜೊತೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಐಸಿಸಿ ನೀರು ಸಲಹಾ ಸಮಿತಿ ನಿರ್ಧಾರ ಖಂಡಿಸಿ ರೈತರಿಂದ ಪ್ರತಿಭಟನೆ: ಮತ್ತೊಂದೆಡೆ, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಣಯ ವಿರೋಧಿಸಿ ಭದ್ರಾವತಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಇದರಿಂದ ಕೆಲಕಾಲ ಶಿವಮೊಗ್ಗ - ಭದ್ರಾವತಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ದಾವಣಗೆರೆ ಜಿಲ್ಲೆ ರೈತರಿಗೆ ಬೇಗ ಭದ್ರಾ ನೀರು ಬಿಟ್ಟು, ನಮಗೆ ಯಾಕೆ 10 ದಿನ ತಡವಾಗಿ ನೀರು ಬಿಡುತ್ತಿದ್ದಿರಾ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಕಾಡಾ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ರೈತ ಮುಖಂಡರಾದ ಕೆ ಟಿ ಗಂಗಾಧರ ಹಾಗೂ ಭದ್ರಾವತಿ ಶಾಸಕ ಸಂಗಮೇಶ್, ಪ್ರತಿಭಟನಾ ಸ್ಥಳಕ್ಕೆ ತೆರಳಿ ರೈತರನ್ನು ಸಮಾಧಾನ ಪಡಿಸಿಪಡಿಸಿದರು.
ರೈತರಿಂದ ರಸ್ತೆ ತಡೆದು ಪ್ರತಿಭಟನೆ ಇದನ್ನೂ ಓದಿ:ಸಿರಿಧಾನ್ಯ ಮೇಳ ಯಶಸ್ವಿ, ವ್ಯಾಪಾರೋದ್ಯಮಿಗಳಿಂದ 5.10 ಕೋಟಿ ಮೌಲ್ಯದ ಒಡಂಬಡಿಕೆ: ಸಚಿವ ಚಲುವರಾಯಸ್ವಾಮಿ