ಕರ್ನಾಟಕ

karnataka

ETV Bharat / state

ವೇತನ ಭತ್ಯೆ ಸರಿಪಡಿಸದಿದ್ದರೆ ಪ್ರತಿಭಟನೆ.. ರಾಜ್ಯ ಸರ್ಕಾರಿ ಫಾರ್ಮಾಸಿಸ್ಟ್ ಸಂಘದ ನಿರ್ಧಾರ - ಸರ್ಕಾರಿ ಫಾರ್ಮಾಸಿಸ್ಟ್ ಸಂಘ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಫಾರ್ಮಾಸಿಸ್ಟ್ ನೌಕರರ ವೇತನ ಹಾಗೂ ಭತ್ಯೆಯಲ್ಲಿ ವ್ಯತ್ಯಾಸವಿದೆ. ಇದನ್ನು ಸರಿಪಡಿಸುವಂತೆ ಮುಖ್ಯಮಂತ್ರಿಯಿಂದ ಹಿಡಿದು ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೂ ಮನವಿ ಮಾಡಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ.

V.Pabhakar
ತಮ್ಮ ಅಳಲು ತೋಡಿಕೊಂಡ ಫಾರ್ಮಾಸಿಸ್ಟ್ ಸಂಘದ ಜಿಲ್ಲಾಧ್ಯಕ್ಷ ವಿ.ಪ್ರಭಾಕರ್

By

Published : Jan 3, 2020, 11:40 AM IST

ಶಿವಮೊಗ್ಗ: ವೇತನ ಹಾಗೂ ಭತ್ಯೆಗಳಲ್ಲಿನ ವ್ಯತ್ಯಾಸ ಸರಿಪಡಿಸುವಂತೆ ಆಗ್ರಹಿಸಿ ಇಂದಿನಿಂದ ಜ.12ರವರೆಗೆ ಕಪ್ಪು ಪಟ್ಟಿ ಧರಿಸಿ ಸಾಕೇಂತಿಕ ಸೇವೆ ಸಲ್ಲಿಸಲು ಸರ್ಕಾರಿ ಫಾರ್ಮಾಸಿಸ್ಟ್ ಸಂಘ ನಿರ್ಧರಿಸಿದೆ ಎಂದು ಸರ್ಕಾರಿ ಫಾರ್ಮಾಸಿಸ್ಟ್ ಸಂಘದ ಜಿಲ್ಲಾಧ್ಯಕ್ಷ ವಿ.ಪ್ರಭಾಕರ್ ತಿಳಿಸಿದರು.

ಫಾರ್ಮಾಸಿಸ್ಟ್ ಸಂಘದ ಜಿಲ್ಲಾಧ್ಯಕ್ಷ ವಿ.ಪ್ರಭಾಕರ್..

ಪತ್ರಿಕಾಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಫಾರ್ಮಾಸಿಸ್ಟ್ ನೌಕರರ ವೇತನ ಹಾಗೂ ಭತ್ಯೆಯಲ್ಲಿ ವ್ಯತ್ಯಾಸವಿದೆ. ಇದನ್ನು ಸರಿಪಡಿಸುವಂತೆ ಮುಖ್ಯಮಂತ್ರಿಯಿಂದ ಹಿಡಿದು ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ. ಆದರೆ, ಯಾವುದೇ ಪ್ರಯೋಜವಾಗಿಲ್ಲ.

ಹೀಗಾಗಿ ನಮ್ಮ ಬೇಡಿಕೆ ಈಡೇರಿಕೆಗಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ ರೀತಿ ಕಪ್ಪುಪಟ್ಟಿ ಧರಿಸಿ ಸೇವೆ ಮಾಡುವ ಮೂಲಕ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ABOUT THE AUTHOR

...view details