ಕರ್ನಾಟಕ

karnataka

ETV Bharat / state

ಶಿವಮೊಗ್ಗ: ಬಡ್ಡಿ ಸಾಲಕ್ಕೆ ಬೇಸತ್ತ ವಿಧವಾ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ - ದೊಡ್ಡಪೇಟೆ ಪೊಲೀಸ್ ಠಾಣೆ

ಶಿವಮೊಗ್ಗದಲ್ಲಿ ಬಡ್ಡಿ ಸಾಲಕ್ಕೆ ಬೇಸತ್ತ ವಿಧವಾ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ
ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ

By

Published : Sep 2, 2022, 5:58 PM IST

ಶಿವಮೊಗ್ಗ: ಬಡ್ಡಿ ಸಾಲಕ್ಕೆ ಬೇಸತ್ತ ವಿಧವಾ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆಯಲ್ಲಿ ಭಾರತಿ ಎಂಬ ಮಹಿಳೆ ಕೆಲಸ ಮಾಡುತ್ತಿದ್ದಾರೆ. ಇವರು ಶಿವಮೊಗ್ಗದ ಅಶೋಕ ನಗರದಲ್ಲಿ ತನ್ನ ಮೂರು ಮಕ್ಕಳೊಂದಿಗೆ ವಾಸ ಮಾಡುತ್ತಿದ್ದಾರೆ.

ಇವರ ಗಂಡ ಕೆಲ ದಿನಗಳ ಹಿಂದೆ ತೀರಿ ಹೋಗಿದ್ದಾರೆ. ಭಾರತಿ ಗಂಡ ಅಶೋಕ ಎಂಬುವವರ ಬಳಿ 20 ಸಾವಿರ ಹಣವನ್ನು ಬಡ್ಡಿ ರೂಪದಲ್ಲಿ ಪಡೆದಿದ್ದರು. ಸಾಲ ಪಡೆದ ಭಾರತಿ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದರು.

ಗಂಡ ಸತ್ತು ಆರು ತಿಂಗಳು ಸುಮ್ಮನಿದ್ದ ಅಶೋಕ ನಂತರ ತನಗೆ ಬಡ್ಡಿ ಸಮೇತ ಹಣ ವಾಪಸ್ ನೀಡುವಂತೆ ಪೀಡಿಸಲು ಶುರು ಮಾಡಿದ್ದಾರೆ. ಸಾಲ ವಾಪಸ್ ಕೇಳಲು ಮನೆಗೆ ಬಂದಾಗಲೆಲ್ಲ ತನಗೆ ದೈಹಿಕ ಹಾಗೂ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಶೋಕನ ಜೊತೆ ನಿಖಿಲ್, ಚಂದ್ರಮ್ಮ ಹಾಗೂ ಲತಾ ಅವರು ಬಂದು ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಓದಿ:ಬೆಂಗಳೂರಿನಲ್ಲಿ ಕಾರು ಕಳ್ಳತನ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ

ABOUT THE AUTHOR

...view details