ಶಿವಮೊಗ್ಗ: ''ಶರಾವತಿ ಹಿನ್ನೀರಿನಲ್ಲಿ ನೀರು ಕಡಿಮೆ ಮಾಡಿದ್ದು ನಾವು ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ಹಿನ್ನೀರಿನಲ್ಲಿ ನಾವು ನೀರು ಕಡಿಮೆ ಮಾಡಲು ಆಗುತ್ತದೆಯೇ'' ಎಂದು ಸಂಸದ ಬಿ.ವೈ. ರಾಘವೇಂದ್ರ ಪ್ರಶ್ನಿಸಿದ್ದಾರೆ.
ಶಿವಮೊಗ್ಗದ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದ ಕೇಂದ್ರದ ಬಿಜೆಪಿ ನರೇಂದ್ರ ಮೋದಿ ಸರ್ಕಾರಕ್ಕೆ 9 ವರ್ಷಗಳ ಪೂರೈಕೆ ಹಿನ್ನೆಲೆಯಲ್ಲಿ, ವರ್ತಕರ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ''ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನ ವಿಚಾರವಾಗಿ ಸಂಬಂಧಪಟ್ಟ ಸಚಿವರ ಬಳಿ ಚರ್ಚೆ ನಡೆಸಿದ್ದೇನೆ ಎಂದರು. ನೂತನ ಹೆದ್ದಾರಿ ನಿರ್ಮಾಣದ ಬಗ್ಗೆಯೂ ಸಚಿವರಾದ ನಿತಿನ್ ಗಡ್ಕರಿಯವರ ಬಳಿ ಚರ್ಚೆ ನಡೆಸಲಾಗಿದೆ. ಶಿವಮೊಗ್ಗದಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಉದ್ಘಾಟನೆ ಬಗ್ಗೆಯೂ ಚರ್ಚೆ ಮಾಡಿದ್ದೇನೆ'' ಎಂದು ತಿಳಿಸಿದರು.
ಇದನ್ನೂ ಓದಿ:ಇಂದಿನ ಬಿಜೆಪಿಗೆ ತತ್ವ ಸಿದ್ಧಾಂತವಿಲ್ಲ.. ಲೋಕಸಭೆ ಚುನಾವಣೆಗೂ ಕೆಆರ್ಪಿಪಿ ಸ್ಪರ್ಧೆ: ಜನಾರ್ದನ್ ರೆಡ್ಡಿ
ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಕ್ಕೆ ತಿರುಗೇಟು ನೀಡಿದ ಸಂಸದ ರಾಘವೇಂದ್ರ ಅವರು, ''ಶರಾವತಿ ಹಿನ್ನೀರಿನಲ್ಲಿ ನಾವು ನೀರು ಕಡಿಮೆ ಮಾಡಿದ್ದೇವೆ ಎಂದು ಬೇಳೂರು ಗೋಪಾಲಕೃಷ್ಣ ಆರೋಪ ಮಾಡಿದ್ದಾರೆ. ಆ ಪುಣ್ಯಾತ್ಮ ಅದ್ಯಾಕೆ ಆ ರೀತಿ ಆರೋಪ ಮಾಡಿದ್ದಾರೋ ಗೊತ್ತಿಲ್ಲ. ಶರಾವತಿ ಹಿನ್ನೀರಿನಲ್ಲಿ ಸೇತುವೆ ನಿರ್ಮಾಣಕ್ಕೆ ನೀರು ಕಡಿಮೆ ಮಾಡಿದ್ದೇವೆ ಎಂದು ಆರೋಪ ಮಾಡಿದ್ದಾರೆ. ಸೇತುವೆ ನಿರ್ಮಾಣ ಮಾಡಲು, ಸಾಮಗ್ರಿಗಳನ್ನು ತೆಗೆದುಕೊಂಡು ಹೋಗಲು ನಮಗೆ ನೀರು ಬೇಕು. ನೀರು ನಾವು ಕಡಿಮೆ ಮಾಡಲು ಆಗುತ್ತದೆಯೇ ಎಂದರು.
ಇದನ್ನೂ ಓದಿ:Guarantee scheme: ಹೊರ ರಾಜ್ಯಗಳಿಂದ ಅಕ್ಕಿ ತರಲು ತೀರ್ಮಾನ : ಜುಲೈ 1ಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ಪ್ರಯತ್ನ