ಕರ್ನಾಟಕ

karnataka

ETV Bharat / state

ಶಿವಮೊಗ್ಗ: ಕೋವಿಡ್​​ ಕೇರ್​​ ಸೆಂಟರ್​ ಈ ರೀತಿಯಾದ್ರೆ ರೋಗ ವಾಸಿಯಾಗಲ್ಲ, ಜಾಸ್ತಿಯಾಗುತ್ತೆ!

ಕೋವಿಡ್ ಕೇರ್ ಸೆಂಟರ್​​ನಲ್ಲಿ ಸ್ವಚ್ಛತೆ ಎಂಬುದೇ ಇಲ್ಲ. ಈ ಸೆಂಟರ್​​ನಲ್ಲಿ ಸ್ವಚ್ಛತೆ ಮಾಡಲು ಸಿಬ್ಬಂದಿಯೇ ಇಲ್ಲ. ಹೀಗಾಗಿ ಇಂತಹ ವಾತಾವರಣದಲ್ಲಿ ಇದ್ದರೆ ಸೋಂಕು ವಾಸಿಯಾಗುವ ಬದಲು ಮತ್ತಷ್ಟು ಉಲ್ಬಣವಾಗಲಿದೆ ಎಂದು ಸೋಂಕಿತರು ಆತಂಕ ವ್ಯಕ್ತಪಡಿಸಿದ್ದಾರೆ.

By

Published : Jun 4, 2021, 1:18 PM IST

Without infrastructure Shivamogga Covid Care Centers
ಅವ್ಯವಸ್ಥೆಯ ಆಗರವಾದ ಶಿವಮೊಗ್ಗದ ಕೋವಿಡ್ ಕೇರ್ ಸೆಂಟರ್​​ಗಳು

ಶಿವಮೊಗ್ಗ:ಕೋವಿಡ್ ಕೇರ್ ಸೆಂಟರ್​​ನಲ್ಲಿ ಕೋವಿಡ್ ಸೋಂಕು ವಾಸಿಯಾಗುವ ಬದಲು ಸೋಂಕು ಹೆಚ್ಚಾಗುತ್ತಿದೆ ಎಂದು ಕೋವಿಡ್ ಕೇರ್ ಸೆಂಟರ್​​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆಂತಕ ವ್ಯಕ್ತಪಡಿಸಿದ್ದಾರೆ.

ನಗರದ ಹೊರವಲಯದ ಮಲ್ಲಿಗೆಹಳ್ಳಿಯ ದೇವರಾಜ ಅರಸ್ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಹಾಗೂ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಹಾಸ್ಟೆಲ್​​ನಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಆದರೆ, ಈ ಎರಡು ಹಾಸ್ಟೆಲ್​​ಗಳು ಅವ್ಯವಸ್ಥೆಯ ಆಗರವಾಗಿವೆ. ಕೋವಿಡ್ ಕೇರ್ ಸೆಂಟರ್ ಮುಂದೆ ರಾಶಿ ರಾಶಿ ಕಸ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಸೋಂಕಿತರು ಆಹಾರ ಸೇವಿಸಿದ ನಂತರ ಅಳಿದುಳಿದ ಆಹಾರ ಪದಾರ್ಥಗಳನ್ನು ಈ ಕಸದ ರಾಶಿಯಲ್ಲಿ ಹಾಕುತ್ತಾರೆ. ಇಲ್ಲಿಗೆ ಬರುವ ಮೂಕ ಪ್ರಾಣಿಗಳು ಇದನ್ನು ಸೇವಿಸುತ್ತಿವೆ ಎಂದು ಸೋಂಕಿತರು ಆರೋಪಿಸಿದ್ದಾರೆ.

ಅವ್ಯವಸ್ಥೆಯ ಆಗರವಾದ ಶಿವಮೊಗ್ಗದ ಕೋವಿಡ್ ಕೇರ್ ಸೆಂಟರ್​​ಗಳು

ಈ ಕೋವಿಡ್ ಕೇರ್ ಸೆಂಟರ್​ನಲ್ಲಿ ಸ್ವಚ್ಛತೆ ಎಂಬುದೇ ಇಲ್ಲ. ಈ ಸೆಂಟರ್​ನಲ್ಲಿ ಸ್ವಚ್ಛತೆ ಮಾಡಲು ಸಿಬ್ಬಂದಿಯೇ ಇಲ್ಲ. ಹೀಗಾಗಿ ಇಂತಹ ವಾತಾವರಣದಲ್ಲಿ ಇದ್ದರೆ ಸೋಂಕು ವಾಸಿಯಾಗುವ ಬದಲು ಮತ್ತಷ್ಟು ಉಲ್ಬಣವಾಗಲಿದೆ ಎಂದು ಸೋಂಕಿತರು ಆತಂಕ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಈ ಮೊದಲು ಕೊರೊನಾ ಪಾಸಿಟಿವ್ ಬಂದವರಿಗೆ ಹೋಂ ಐಸೋಲೋಷನ್​​ಗೆ ಅವಕಾಶ ನೀಡಲಾಗಿತ್ತು. ಆದರೆ ಹೋಂ ಐಸೋಲೋಷನ್​​ನಿಂದಾಗಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ಕಾರಣದಿಂದಾಗಿ ಜಿಲ್ಲಾಡಳಿತ ಹೋಂ ಐಸೋಲೋಷನ್​​ಗೆ ಅವಕಾಶ ನೀಡದೇ ಕೋವಿಡ್ ಕೇರ್ ಸೆಂಟರ್ ಆರಂಭಿಸಿದೆ. ಜಿಲ್ಲೆಯಲ್ಲಿ ಒಟ್ಟು 17 ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದ್ದು, ಇದರಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿಯೇ 9 ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಸೋಂಕಿನ ಗುಣಲಕ್ಷಣ ಇಲ್ಲದಿದ್ದರೂ ಕೊರೊನಾ ಪಾಸಿಟಿವ್ ಪತ್ತೆಯಾದ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್​ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇಲ್ಲಿನ ಅವ್ಯವಸ್ಥೆ ಕಂಡ ಸೋಂಕಿತರು ನಮಗೆ ಕೋವಿಡ್ ಕೇರ್ ಸೆಂಟರ್​ನಿಂದ ಮುಕ್ತಿ ಕೊಡಿಸಿ, ಹೋಂ ಐಸೋಲೋಷನ್​​ಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ABOUT THE AUTHOR

...view details