ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಓರ್ವ ಮಹಿಳೆ ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಕೋವಿಡ್ಗೆ ಮಹಿಳೆ ಬಲಿ: ಶಿವಮೊಗ್ಗದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿಕೆ - Shimoga
ಶಿವಮೊಗ್ಗದಲ್ಲಿ ಇಂದು 55 ವರ್ಷದ ಮಹಿಳೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೋವಿಡ್ಗೆ ಮಹಿಳೆ ಬಲಿ: ಶಿವಮೊಗ್ಗದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿಕೆ
ಕಳೆದ 10 ದಿನದ ಹಿಂದೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ 55 ವರ್ಷದ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ. ಇವರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಟಿಪ್ಪು ನಗರದ ನಿವಾಸಿಯಾಗಿದ್ದು, ಇವರ ಅಂತ್ಯಕ್ರಿಯೆ ಗೋಪಾಳದ ಸಶ್ಮಾನದಲ್ಲಿ ನಡೆಸಲಾಗುತ್ತಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಪ್ರಮಾಣ ಏರಿಕೆಯಾಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.