ಶಿವಮೊಗ್ಗ:ಕಳೆದ ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಗೃಹಿಣಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಶಿವಮೊಗ್ಗದ ಅಶ್ವಥ್ ನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ ನವ್ಯಶ್ರೀ, ಶಿವಮೊಗ್ಗ ನಗರದ ಖ್ಯಾತ ವೈದ್ಯೆಯಾದ ಡಾ.ಜಯಶ್ರೀ ಅವರ ಸೊಸೆ.
ಕೌಟುಂಬಿಕ ಕಲಹ ಶಂಕೆ: 6 ತಿಂಗಳ ಹಿಂದೆ ಮದುವೆಯಾಗಿದ್ದ ಗೃಹಿಣಿ ಆತ್ಮಹತ್ಯೆ - ಶಿವಮೊಗ್ಗದಲ್ಲಿ ಗೃಹಿಣಿ ಆತ್ಮಹತ್ಯೆ
ಕಳೆದ ಆರು ತಿಂಗಳ ಹಿಂದೆ ಆಕಾಶ್ ಎಂಬುವವರನ್ನು ಮದುವೆಯಾಗಿದ್ದ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹ ಕಾರಣವಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಆರು ತಿಂಗಳ ಹಿಂದೆ ಮದುವೆ ಆಗಿದ್ದ ಗೃಹಿಣಿ ಆತ್ಮಹತ್ಯೆ
ನವ್ಯ ಕಳೆದ ಆರು ತಿಂಗಳ ಹಿಂದಷ್ಟೇ ಆಕಾಶ್ ಎಂಬವರನ್ನು ಮದುವೆ ಆಗಿದ್ದರು. ನಿನ್ನೆ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಭಾನುವಾರ ಬೆಳಗ್ಗೆ ಈ ವಿಷಯ ಬೆಳಕಿಗೆ ಬಂದಿದೆ. ಸಾವಿಗೆ ಕೌಟುಂಬಿಕ ಕಲಹ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಚಿತ್ರದುರ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ...