ಕರ್ನಾಟಕ

karnataka

ETV Bharat / state

ಸಿಕ್ಕಿರುವ ಅವಕಾಶ ಬಳಸಿಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸಿ: ಸಂಸದ ಬಿ.ವೈ. ರಾಘವೇಂದ್ರ - Shimoga

ಸೂಡಾ ಕಚೇರಿಯಲ್ಲಿ ನೂತನ ಅಧ್ಯಕ್ಷರಿಗೆ ಹೂಗುಚ್ಛ ನೀಡಿ ಸಂಸದ ಬಿ.ವೈ.ರಾಘವೇಂದ್ರ ಅಭಿನಂದಿಸಿದರು.

MP B.Y. Raghavendra
ಸೂಡಾ ಕಚೇರಿ

By

Published : Sep 1, 2020, 9:42 PM IST

ಶಿವಮೊಗ್ಗ: ಸಿಕ್ಕಿರುವ ಅವಕಾಶ ಬಳಸಿಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸಿ ಎಂದು ಸಂಸದ ಬಿ.ವೈ.ರಾಘವೇಂದ್ರ ನೂತನ ಸೂಡಾ ಅಧ್ಯಕ್ಷರಿಗೆ ಸಲಹೆ ನೀಡಿದರು.

ಸೂಡಾ ಕಚೇರಿಯಲ್ಲಿ ನೂತನ ಅಧ್ಯಕ್ಷರಿಗೆ ಹೂಗುಚ್ಛ ನೀಡಿ ಅಭಿನಂದಿಸಿದ ಅವರು, ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದಲ್ಲಿ ನಡೆಯಬೇಕಿರುವ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ, ರಾಜ್ಯದಲ್ಲಿಯೇ ಮಾದರಿ ಪ್ರಾಧಿಕಾರವನ್ನಾಗಿಸುವ ನಿಟ್ಟಿನಲ್ಲಿ ಮುಂದಾಗಿ ಎಂದು ಹೇಳಿದರು.

ಸಂಸದ ಬಿ.ವೈ.ರಾಘವೇಂದ್ರ ಸೂಡಾ ಕಚೇರಿಯಲ್ಲಿ ನೂತನ ಅಧ್ಯಕ್ಷರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೆ.ಬಿ. ಅಶೋಕ್ ನಾಯ್ಕ್, ಆರ್ಯವೈಶ್ಯ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಡಿ.ಎಸ್.ಅರುಣ್, ಸೂಡಾ ಸಮಿತಿ ಸದಸ್ಯರಾದ ರಾಮಲಿಂಗಯ್ಯ, ಪಾಲಿಕೆ ಸದಸ್ಯೆ ಅನಿತಾ ರವಿಶಂಕರ್, ಬಿಜೆಪಿ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಬಳ್ಳೇಕೆರೆ ಸಂತೋಷ್ ಮೊದಲಾದವರಿದ್ದರು.

ಇದೇ ಸಂದರ್ಭದಲ್ಲಿ ಆಶ್ರಯ ಸಮಿತಿ ಸದಸ್ಯರಿಗೂ ಸಹ ಶುಭ ಕೋರಿದರು. ಇದಕ್ಕೂ ಮೊದಲು ನಿಧನರಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ABOUT THE AUTHOR

...view details