ಶಿವಮೊಗ್ಗ:ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಇಂದು ನಗರದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.
ಶಿವಮೊಗ್ಗದಲ್ಲಿ ವಿಶ್ವ ಏಡ್ಸ್ ಜಾಗೃತಿ ಜಾಥಾ - ವಿಶ್ವ ಏಡ್ಸ್ ದಿನಾಚರಣೆ ಲೆಟೆಸ್ಟ್ ನ್ಯೂಸ್
ಇಂದು ನಗರದಲ್ಲಿ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಏಡ್ಸ್ ಜಾಗೃತಿ ಜಾಥಾ ನಡೆಸಲಾಯಿತು. ಈ ಜಾಥಾದಲ್ಲಿ ಅನೇಕರು ಭಾಗಿಯಾಗಿದ್ದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಏಡ್ಸ್ ದಿನದ ನಿಮಿತ್ತ ಏಡ್ಸ್ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾಸ್ಟರ್ ಆರ್ .ಕೆ.ಜಿ.ಎಂ.ಎಂ ಮಹಾ ಸ್ವಾಮೀಜಿ ಜಾಥಾಕ್ಕೆ ಚಾಲನೆ ನೀಡಿದರು.
ಜಾಥದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಂಎಲ ವೈಶಾಲಿ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಹಾಗೂ ಅಧಿಕಾರಿಗಳು ಹಾಗೂ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು, ಎನ್ಸಿಸಿ ಕೆಡೆಟ್ಗಳು ಭಾಗವಹಿಸಿದ್ದರು.
TAGGED:
Shimoga latest news,