ಕರ್ನಾಟಕ

karnataka

ETV Bharat / state

ಯಡಿಯೂರಪ್ಪ ರಾಜೀನಾಮೆ: ಶಿಕಾರಿಪುರ ಬಂದ್, ಬಿಎಸ್‌ವೈಗೆ ಜೈಕಾರ, ವರಿಷ್ಠರ ವಿರುದ್ಧ ಆಕ್ರೋಶ - Shikaripura Bandh

ಯಡಿಯೂರಪ್ಪ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುತ್ತಿದ್ದಂತೆಯೇ ಶಿಕಾರಿಪುರ ಪಟ್ಟಣದಲ್ಲಿ ಅವರ ಅಭಿಮಾನಿಗಳು, ಕಾರ್ಯಕರ್ತರು ಪಾದಯಾತ್ರೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಯಡಿಯೂರಪ್ಪನವರಿಗೆ ಜೈಕಾರ ಹಾಕಿದರು. ಹಾಗೆಯೇ ಕೇಂದ್ರದ ಬಿಜೆಪಿ ವರಿಷ್ಠರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

yadiyurappas-resignation-shikaripura-bandh
ಬಿಜೆಪಿ ಕಾರ್ಯಕರ್ತರು

By

Published : Jul 26, 2021, 3:20 PM IST

ಶಿವಮೊಗ್ಗ: ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಸಲ್ಲಿಸುತ್ತಿದ್ದಂತೆಯೇ ಅವರ ಸ್ವಕ್ಷೇತ್ರ ಶಿಕಾರಿಪುರ ಪಟ್ಟಣವನ್ನು ಸ್ವಯಂಪ್ರೇರಿತ ಬಂದ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ಯಡಿಯೂರಪ್ಪ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುತ್ತಿದ್ದಂತೆಯೇ ಶಿಕಾರಿಪುರ ಪಟ್ಟಣದಲ್ಲಿ ಅವರ ಅಭಿಮಾನಿಗಳು, ಕಾರ್ಯಕರ್ತರು ಪಟ್ಟಣದಲ್ಲಿ‌ ಪಾದಯಾತ್ರೆ ನಡೆಸಿದರು. ಈ ಸಂದರ್ಭದಲ್ಲಿ ಯಡಿಯೂರಪ್ಪನವರಿಗೆ ಜೈಕಾರ ಮೊಳಗಿಸಿ ಕೇಂದ್ರದ ಬಿಜೆಪಿ ವರಿಷ್ಠರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಅಭಿಮಾನಿಗಳು ಮೆರವಣಿಗೆ ಹೊರಡುತ್ತಲೇ, ಅಂಗಡಿ ಮುಂಗಟ್ಟುಗಳನ್ನು ವ್ಯಾಪಾರಿಗಳು ತಾವೇ ಸ್ವಯಂ ಪ್ರೇರಿತ ಬಂದ್ ಮಾಡಿಕೊಂಡು ಹೋಗುತ್ತಿದ್ದರು. ಪೊಲೀಸರು ಪಟ್ಟಣದಲ್ಲಿ ಗಸ್ತು ತಿರುಗುತ್ತಿದ್ದಾರೆ. ಶಿರಾಳಕೊಪ್ಪದಲ್ಲೂ ಸಹ ಅಂಗಡಿಗಳನ್ನು ಬಂದ್ ಮಾಡಲಾಗುತ್ತಿದೆ.

ಇದನ್ನೂ ಓದಿ:ಉಸ್ತುವಾರಿ ಮುಖ್ಯಮಂತ್ರಿ ಆಗಿ ಕರ್ತವ್ಯ ನಿರ್ವಹಿಸಿ: ಬಿಎಸ್​​ವೈಗೆ ಗೆಹ್ಲೋಟ್ ಸೂಚನೆ

ABOUT THE AUTHOR

...view details