ಶಿವಮೊಗ್ಗ:ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಪಕ್ಷವು ಮಾಡಿರುವ 1800 ಕೋಟಿ ರೂಪಾಯಿಗಳ ಡೈರಿ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ನವರು ಮಾಡಿರುವ ಆರೋಪಕ್ಕೆ ಯಾವುದೇ ಸತ್ಯಾಸತ್ಯತೆ ಇಲ್ಲ ಎಂದರು.
ಯಡಿಯೂರಪ್ಪನವರಿಗೆ ಡೈರಿ ಬರೆಯುವ ಅಭ್ಯಾಸವೇ ಇಲ್ಲ: ಬಿ.ವೈ.ರಾಘವೇಂದ್ರ - ಡೈರಿ
ಬಿ.ಎಸ್.ಯಡಿಯೂರಪ್ಪ ಅವರಿಗೆ ಡೈರಿ ಬರೆಯುವ ಅಭ್ಯಾಸವೇ ಇಲ್ಲ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ನವರಿಗೆ ಯಾವುದೇ ವಿಷಯ ಸಿಗದಿದ್ದಾಗ ಈ ರೀತಿಯ ಸುಳ್ಳು ಆರೋಪ ಮಾಡುವ ಮೂಲಕ ಜನರನ್ನು ದಾರಿ ತಪ್ಪಸುತ್ತಿದ್ದಾರೆ ಎಂದು ಬಿ.ವೈ.ರಾಘವೇಂದ್ರ ತಿಳಿಸಿದರು.
ಬಿ ವೈ ರಾಘವೇಂದ್ರ
ಯಡಿಯೂರಪ್ಪನವರಿಗೆ ಯಾವುದೇ ರೀತಿಯ ಡೈರಿ ಬರೆಯುವ ಅಭ್ಯಾಸವೇ ಇಲ್ಲ ಎಂದರು.ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ನವರಿಗೆ ಯಾವುದೇ ವಿಷಯ ಸಿಗದಿದ್ದಾಗ ಈ ರೀತಿಯ ಸುಳ್ಳು ಆರೋಪ ಮಾಡುವ ಮೂಲಕ ಜನರನ್ನು ದಾರಿ ತಪ್ಪಸುತ್ತಿದ್ದಾರೆಯೇ ಹೊರತು ಬೇರೆ ಯಾವ ಉದ್ದೇಶ ಇಲ್ಲ ಎಂದರು.
2009ರಲ್ಲೇ ಈ ಡೈರಿ ಸಿಕ್ಕಿದೆ ಎಂದು ಕಾಂಗ್ರೆಸ್ನವರು ಹೇಳುತ್ತಿದ್ದಾರೆ. ಹಾಗಾದರೆ ಇಷ್ಟು ದಿನ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು. ಈ ಆರೋಪವು joke of the year ಎಂದು ವ್ಯಂಗ್ಯವಾಡಿದರು.