ಶಿವಮೊಗ್ಗ: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಜಿಲ್ಲೆಯ ಸೊರಬ ತಾಲೂಕಿನ ಉದಯೋನ್ಮುಖ ಕ್ರಿಕೆಟರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆನವಟ್ಟಿ ಪಟ್ಟಣದ ಚಾಮರಾಜ ಬಡಾವಣೆಯ ತರುಣ್ (18) ಮೃತ ಕ್ರಿಕೆಟರ್.
ಸೊರಬ ತಾಲೂಕಿನ ಆನವಟ್ಟಿ ಪಟ್ಟಣದಲ್ಲಿ ಗುರುವಾರ ಈ ದುರ್ಘಟನೆ ಸಂಭವಿಸಿದೆ. ಆನವಟ್ಟಿಯಿಂದ ಶಿರಾಳಕೊಪ್ಪ ಮಾರ್ಗವಾಗಿ ತರುಣ್ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.