ಶಿವಮೊಗ್ಗ: ತನ್ನಿಬ್ಬರು ಸಹೋದರರಂತೆ ತನಗೆ ಸರ್ಕಾರಿ ಉದ್ಯೋಗ ಸಿಗಲಿಲ್ಲ ಎಂದು ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನ ಮೆಳವರಿಗೆ ಗ್ರಾಮದಲ್ಲಿ ನಡೆದಿದೆ. ರವಿ ಎಂಬಾತ ನೇಣಿಗೆ ಶರಣಾಗಿದ್ದಾನೆ. ಈತನ ಇಬ್ಬರು ಅಣ್ಣಂದಿರು ಸರ್ಕಾರಿ ಉದ್ಯೋಗದಲ್ಲಿದ್ದಾರೆ. ರವಿ ಹಲವು ಸಲ ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನ ಪಟ್ಟಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ.
ಸಹೋದರರಂತೆ ಸರ್ಕಾರಿ ನೌಕರಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ - ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮೆಳವರಿಗೆ ಗ್ರಾಮ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮೆಳವರಿಗೆ ಗ್ರಾಮದಲ್ಲಿ ಸರ್ಕಾರಿ ಉದ್ಯೋಗ ಸಿಗಲಿಲ್ಲವೆಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತನ ಸಹೋದರರಿಬ್ಬರು ಸರ್ಕಾರಿ ಉದ್ಯೋಗದಲ್ಲಿದ್ದಾರೆ.
ಶಿವಮೊಗ್ಗ
ಸರ್ಕಾರಿ ನೌಕರಿ ಸಿಗದ ಕಾರಣ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಡ್ ಬರೆದಿಟ್ಟು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಮೋದಿ ಫೋಟೋ ಹಾಕಿದ ಮುಸ್ಲಿಂ ಯುವಕ: ಮನೆ ಖಾಲಿ ಮಾಡುವಂತೆ ಮಾಲೀಕನ ಬೆದರಿಕೆ