ಶಿವಮೊಗ್ಗ:ಪ್ರೀತಿಸಿದ ಹುಡುಗಿ ಮೋಸ ಮಾಡಿದಳೆಂದು ನೊಂದ ಯುವಕ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ದಿಲೀಪ್ ಎಂಬಾತ ಮೃತ ಯುವಕನಾಗಿದ್ದಾನೆ.
ಕೆಲವು ವರ್ಷಗಳಿಂದ ದಿಲೀಪ್ ಮತ್ತು ಕುಟುಂಬಸ್ಥರು ಬೆಂಗಳೂರಿನಲ್ಲಿ ವಾಸವಿದ್ದುಕೊಂಡು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಯುವಕನಿಗೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದ ಯುವತಿಯೋರ್ವಳ ಪರಿಚಯವಾಗಿದ್ದು, ಬಳಿಕ ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ. ಆದರೆ ನಂತರದ ದಿನಗಳಲ್ಲಿ ಮನೆಯವರ ಕಾರಣ ನೀಡಿ ಯುವತಿಯು ಪ್ರೀತಿ ನಿರಾಕರಿಸಿದ್ದಾಳೆ ಎನ್ನಲಾಗ್ತಿದೆ.