ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಸಾಲೂರಿನ ಹಿರೇಕೆರೆಯಲ್ಲಿ ಈಜಲು ಹೋಗಿದ್ದ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ.
ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರಲ್ಲಿ ಮುಳುಗಿ ಸಾವು.. - Young men died
ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶಿಕಾರಿಪುರದಲ್ಲಿ ನಡೆದಿದೆ.
ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರಲ್ಲಿ ಮುಳುಗಿ ಸಾವು
ಚಿಕ್ಕ ಸಾಲೂರು ಗ್ರಾಮದ ಲಿಂಗರಾಜ್ ಬಿನ್ ಶಿವರಾಜಪ್ಪ (23) ವರ್ಷ ಮೃತ ಯುವಕ. ಲಿಂಗರಾಜ್ ಶಿಕಾರಿಪುರದಲ್ಲಿ ಖಾಸಗಿ ಬಸ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ.
ಸ್ನೇಹಿತರ ಜೊತೆ ಸಾಲೂರು ಮಠದ ಪಕ್ಕದಲ್ಲಿರುವ ಹೀರೆಕೆರೆಯಲ್ಲಿ ಈಜಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.