ಶಿವಮೊಗ್ಗ :ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಡಿ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಯೂತ್ ಕಾಂಗ್ರೆಸ್ ನಗರದ ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದೆ.
ಭಾನುವಾರ ನಗರದ ಮಾತಾ ಮಾಂಗಲ್ಯ ಮಂದಿರದಲ್ಲಿ ನಡೆದ ಬಿಜೆಪಿ ಪಕ್ಷದ ನಗರ ಕಾರ್ಯಕಾರಣಿ ಸಭೆಯಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಒಂದಕ್ಕೆ ಎರಡು ತಲೆ ತೆಗೆಯಿರಿ ಎನ್ನುವ ಮೂಲಕ ನೆಮ್ಮದಿಯಿಂದ ಇರುವ ಸಮಾಜದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿ ಸಮಾಜದ ವಾತಾವರಣ ಹಾಳು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹಾಗಾಗಿ, ಕೂಡಲೇ ಸಮಾಜಘಾತುಕ ಕಾಯ್ದೆಯಡಿ ದೂರು ದಾಖಲಿಸಿಕೊಂಡು ಸಚಿವರನ್ನು ಬಂಧಿಸುವಂತೆ ನಗರದ ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದರು. ಅಷ್ಟೇ ಅಲ್ಲ, ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರನ್ನು ಅವ್ಯಾಚ್ಛ ಶಬ್ದಗಳಿಂದ ನಿಂದಿಸಿದ್ದಾರೆ. ಸಂವಿಧಾನದಡಿ ಆಯ್ಕೆಯಾದ ಇವರು ಅಸಂವಿಧಾನಿಕ ಪದಗಳನ್ನು ಬಳಸಿ ಅವಾಚ್ಯವಾಗಿ ಮಾತನಾಡಿರುವುದನ್ನು ಖಂಡಿಸಿದರು.