ಶಿವಮೊಗ್ಗ :ರಾಸಲೀಲೆ ಸಿಡಿ ಬಿಡುಗಡೆಯಾದ ಹಿನ್ನೆಲೆಸಚಿವರಮೇಶ್ ಜಾರಕಿಹೋಳಿ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಗೋಪಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ರಮೇಶ್ ಜಾರಕಿಹೊಳಿ ಭಾವ ಚಿತ್ರಕ್ಕೆ ಚಪ್ಪಲಿ ಏಟು ಕೊಟ್ಟು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಈ ಕೂಡಲೇ ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯಬೇಕೆಂದು ಆಗ್ರಹಿಸಿದರು.