ಕರ್ನಾಟಕ

karnataka

ETV Bharat / state

ರಾಯಚೂರಿನಲ್ಲಿಂದು 198 ಕೊರೊನಾ ಪ್ರಕರಣಗಳು ಪತ್ತೆ: ಸೋಂಕಿತರ ಸಂಖ್ಯೆ 9,100ಕ್ಕೆ ಏರಿಕೆ - ರಾಯಚೂರು ಕೊರೊನಾ ಪ್ರಕರಣಗಳು

ರಾಯಚೂರಿನಲ್ಲಿಂದು 198 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 2 ಜನ ಸೋಂಕಿತರು ಬಲಿಯಾಗಿದ್ದಾರೆ.

Raichur
Raichur

By

Published : Sep 11, 2020, 5:33 PM IST

ರಾಯಚೂರು: ಜಿಲ್ಲೆಯಲ್ಲಿಂದು 198 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,100 ಕ್ಕೆ ಏರಿಕೆಯಾಗಿದೆ.

ರಾಯಚೂರು ತಾಲೂಕಿನಲ್ಲಿ 60, ಮಾನವಿ 24, ಲಿಂಗಸೂಗೂರು 60, ಸಿಂಧನೂರು 30, ದೇವದುರ್ಗದಲ್ಲಿ 24 ಪ್ರಕರಣಗಳು ಇಂದು ವರದಿಯಾಗಿವೆ. ಈವರೆಗೆ ಪತ್ತೆಯಾಗಿರುವ ಸೋಂಕಿತರ ಪೈಕಿ 7,357 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,626 ಪ್ರಕರಣಗಳು ಸಕ್ರಿಯವಾಗಿವೆ.

ಇಂದು 2 ಜನ ಸೋಂಕಿತರು ಕೊರೊನಾಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 117 ಕ್ಕೆ ಏರಿಕೆಯಾಗಿದೆ. ಈಗಾಗಲೇ ಕೊರೊನಾ ಸೋಂಕಿತರನ್ನು ರೋಗದ ಗುಣಲಕ್ಷಣದ ಆಧಾರದ ಮೇಲೆ ಕೋವಿಡ್ ಕೇರ್, ಆಸ್ಪತ್ರೆ, ಸ್ವಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಿಸುವ ಮೂಲಕ ಚಿಕಿತ್ಸೆ ನೀಡಲಾಗುತ್ತಿದ್ದು, ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details