ಕೊಪ್ಪಳ: ಜಿಲ್ಲೆಯಲ್ಲಿ ಇಂದು 23 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 12,540 ಕ್ಕೆ ಏರಿಕೆಯಾಗಿದೆ.
ಕೊಪ್ಪಳದಲ್ಲಿ 23 ಕೊರೊನಾ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 12,540 ಕ್ಕೆ ಏರಿಕೆ
ಕೊಪ್ಪಳ ಜಿಲ್ಲೆಯಲ್ಲಿ ಇಂದು 23 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ 08, ಕೊಪ್ಪಳ ತಾಲೂಕಿನಲ್ಲಿ 07, ಕುಷ್ಟಗಿ ತಾಲೂಕಿನಲ್ಲಿ 06 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 02 ಪ್ರಕರಣ ಸೇರಿ ಇಂದು ಒಟ್ಟು 23 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ ಒಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 266 ಜನ ಸೋಂಕಿತರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಇಂದು 182 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 11,336 ಜನರು ಗುಣಮುಖರಾಗಿದ್ದಾರೆ. 819 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.