ಮೈಸೂರು: ಜಿಲ್ಲೆಯಲ್ಲಿ ಇಂದು 641 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 43,430 ಕ್ಕೆ ಏರಿಕೆಯಾಗಿದೆ.
ಮೈಸೂರಿನಲ್ಲಿ 641 ಕೊರೊನಾ ಪ್ರಕರಣಗಳು ದೃಢ: 11 ಜನ ಬಲಿ - ಮೈಸೂರಿನಲ್ಲಿ 641 ಕೊರೊನಾ ಪ್ರಕರಣಗಳು ದೃಢ
ಮೈಸೂರು ಜಿಲ್ಲೆಯಲ್ಲಿ ಇಂದು 11 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಜೊತೆಗೆ 678 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Mysure
ಜಿಲ್ಲೆಯಲ್ಲಿಂದು 678 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 35,728 ಮಂದಿ ಗುಣಮುಖರಾಗಿದ್ದಾರೆ. ಮತ್ತು 6,795 ಜನರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರ ಮಾಹಿತಿ:
ಇಂದು ಒಂದೇ ದಿನ ಜಿಲ್ಲೆಯಲ್ಲಿ ಕೊರೊನಾಕ್ಕೆ 11 ಜನ ಮೃತಪಟ್ಟಿದ್ದು, ಆ ಮೂಲಕ ಸಾವನ್ನಪ್ಪಿದವರ ಸಂಖ್ಯೆ 907 ಕ್ಕೆ ಏರಿಕೆಯಾಗಿದೆ.