ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಇಂದು ಮತ್ತೊಂದು ಬಲಿಯಾಗಿದೆ. ಕಳೆದ ಮೂರು ದಿನಗಳಲ್ಲಿ 4 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಗಣಿಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 8ನೇ ಬಲಿ - Bellary corona cases
ಬಳ್ಳಾರಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಇಂದು ಮತ್ತೊಬ್ಬರು ಬಲಿಯಾಗಿದ್ದಾರೆ.
ಸಂಡೂರು ತಾಲೂಕಿನ 73 ವರ್ಷದ ವಯೋವೃದ್ಧ ವೈರಸ್‌ಗೆ ಬಲಿಯಾಗಿದ್ದಾರೆ. ಜೂ.19ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಟಿಬಿ ಸ್ಯಾನಿಟೋರಿಯಂ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ ಕೋವಿಡ್ ಕಾಣಿಸಿಕೊಂಡಿದ್ದು ಜೂನ್ 22 ರಂದು ವಿಮ್ಸ್‌ಗೆ ಸ್ಥಳಾಂತರಿಸಲಾಗಿತ್ತು. ಮಧುಮೇಹ, ಅಧಿಕ ರಕ್ತದೊತ್ತಡ ಸೇರಿದಂತೆ ಇತರೆ ಕಾಯಿಲೆಯಿಂದ ಬಳಲುತ್ತಿದ್ದ ಇವರಿಗೆ ಉಸಿರಾಟದಲ್ಲಿ ಏರುಪೇರಾಗಿತ್ತು. ತಕ್ಷಣ ಅವರನ್ನು ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆಗೆ ಸ್ಪಂದಿಸದೆ ಮಧ್ಯರಾತ್ರಿ 1.55 ಕ್ಕೆ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಜಿಲ್ಲಾಡಳಿತದ ಮಾಹಿತಿ ಪ್ರಕಾರ, ಒಟ್ಟು 8 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.