ಬಾಗಲಕೋಟೆ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಇಂದು ಸಹ ಜಿಲ್ಲೆಯಲ್ಲಿ ಕೋವಿಡ್-19 ಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಬಾಗಲಕೋಟೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 4ಕ್ಕೆ ಏರಿಕೆ - ಕೊರೊನಾ ಸಾವಿನ ಸಂಖ್ಯೆ
ಬಾಗಲಕೋಟೆ ಜಿಲ್ಲೆಯಲ್ಲಿ ಕೋವಿಡ್-19 ಗೆ ಓರ್ವ ವ್ಯಕ್ತಿ ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
Corona
ಬಾಗಲಕೋಟೆ ತಾಲೂಕಿನ ಮುಡಪಲಜೀವಿ ಗ್ರಾಮದ 55 ವರ್ಷದ (ಪಿ-10642) ಮೃತಪಟ್ಟ ವ್ಯಕ್ತಿ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತ ವ್ಯಕ್ತಿಗೆ ಕಳೆದ ಜೂನ್ 26 ರಂದು ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇಂದು ಅವರು ಮೃತಪಟ್ಟಿದ್ದು, ಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ತಿಳಿಸಿದ್ದಾರೆ.