ಗಾಂಜಾ ಸಾಗಾಟ ಮಾಡ್ತಿದ್ದ ಆರೋಪಿ ಅಂದರ್: 4 ಲಕ್ಷದ ಗಾಂಜಾ ಜಪ್ತಿ - Bidar district news
ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಭಾಲ್ಕಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೀದರ್:ಅಕ್ರಮವಾಗಿ ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುತ್ತಿದ್ದ ದಂಧೆಕೊರರನ್ನು ಬಂಧಿಸುವಲ್ಲಿ ಭಾಲ್ಕಿ ಪೊಲೀಸರು ಯಶಸ್ವಿಯಾಗಿದ್ದು, 4 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯ ಔರಾದ್ ತಾಲೂಕಿನ ಜಂಬಗಿ ಗ್ರಾಮದ ದಿಗಂಬರ್ ಭಾಲ್ಕೆ ಎಂಬುವವನು ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಭಾಲ್ಕಿ ಡಿವೈಎಸ್ ಪಿ ದೇವರಾಜ್.ಬಿ ಅವರ ನೇತೃತ್ವದಲ್ಲಿ ಸಿಪಿಐ ಟಿ.ಆರ್ ರಾಘವೇಂದ್ರ, ಪಿಎಸ್ಐಗಳಾದ ಮಹೇಂದ್ರಕುಮಾರ್, ಸುವರ್ಣ, ಪ್ರಭಾಕರ ಪಾಟೀಲ್ ದಾಳಿ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ 4 ಲಕ್ಷ ರುಪಾಯಿ ಮೌಲ್ಯದ 36 ಕೆ.ಜಿ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ. ಈ ಕುರಿತು ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.