ಕರ್ನಾಟಕ

karnataka

ETV Bharat / state

ಕ್ವಾರಂಟೈನ್ ಕೇಂದ್ರದಲ್ಲಿರುವವರನ್ನು ಚೆನ್ನಾಗಿ ನೋಡಿಕೊಳ್ಳಿ.. ನ್ಯಾ. ಮಲ್ಲೂರ್

ವಿವಿಧ ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅರ್ಜುನ್ ಎಸ್. ಮಲ್ಲೂರ್ ಅವರು ಶಂಕಿತರನ್ನು ಸರಿಯಾಗಿ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಕ್ವಾರಂಟೈನ್ ಕೇಂದ್ರದಲ್ಲಿರುವವರನ್ನು ಚೆನ್ನಾಗಿ ನೋಡಿಕೊಳ್ಳಿ: ನ್ಯಾ.ಮಲ್ಲೂರ್
ಕ್ವಾರಂಟೈನ್ ಕೇಂದ್ರದಲ್ಲಿರುವವರನ್ನು ಚೆನ್ನಾಗಿ ನೋಡಿಕೊಳ್ಳಿ: ನ್ಯಾ.ಮಲ್ಲೂರ್

By

Published : Jun 22, 2020, 7:45 PM IST

ಬಳ್ಳಾರಿ: ನಗರದಲ್ಲಿನ ವಿವಿಧ ಕ್ವಾರಂಟೈನ್ ಕೇಂದ್ರಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅರ್ಜುನ್ ಎಸ್ ಮಲ್ಲೂರ್ ಅವರು ಭೇಟಿ ನೀಡಿ ಪರಿಶೀಲಿಸಿದರು.

ನಗರದ ಮಯೂರ್ ಹೋಟೆಲ್ ಹಿಂಭಾಗದಲ್ಲಿರುವ ವಸತಿ ನಿಲಯಗಳು ಹಾಗೂ ಕುಡಿತಿನಿಯ ಮೋರಾರ್ಜಿ ದೇಸಾಯಿ ವಸತಿ ನಿಲಯದ ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಸ್ಥಿತಿಗತಿ ವೀಕ್ಷಿಸಿದರು.

ನಂತರ ನಿಗಾದಲ್ಲಿರುವವರನ್ನು ಸರಿಯಾಗಿ ನೋಡಿಕೊಳ್ಳುವಂತೆ ಹಾಗೂ ಉತ್ತಮ ಗುಣಮಟ್ಟದ ಆಹಾರ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡುವಂತೆ ಕ್ವಾರಂಟೈನ್ ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ABOUT THE AUTHOR

...view details