ಅಥಣಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿರುವ ಬ್ಯಾನರ್ ಗೆ ಕಿಡಿಗೇಡಿಗಳು ಕಲ್ಲು ತೂರಾಡಿರುವ ಘಟನೆ ತಾಲೂಕಿನ ಯಲಿಹಡಲಗಿ ಗ್ರಾಮದಲ್ಲಿ ನಡೆದಿದೆ.
ಅಂಬೇಡ್ಕರ್ ಬ್ಯಾನರ್ ಹಾನಿಗೊಳಿಸಿದ ಕಿಡಿಗೇಡಿಗಳು: ಗ್ರಾಮಸ್ಥರಿಂದ ಪ್ರತಿಭಟನೆ - ಯಲಿಹಡಲಗಿ ಗ್ರಾಮಸ್ಥರ ಪ್ರತಿಭಟನೆ
ಯಲಿಹಡಲಗಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವಿರುವ ಬ್ಯಾನರ್ ಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಕುರಿತು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಅಥಣಿ ಐಗಳಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಅಥಣಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಹಾಗೂ ಈ ದುಷ್ಕೃತ್ಯ ಎಸಗಿದವರನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಿನ್ನೆ ಸಂಜೆ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿರುವ ಬ್ಯಾನರ್ ಅನ್ನು ಗ್ರಾಮದಲ್ಲಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಕೆಲವು ಕಿಡಿಗೇಡಿಗಳು ಇದನ್ನು ಸಹಿಸದೆ ಈ ರೀತಿ ಮಾಡಿದ್ದಾರೆ ಹಾಗೂ ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.