ಮೈಸೂರು: ನಿರ್ಗಮಿತ ಜಿಲ್ಲಾಧಿಕಾರಿ ಬಿ. ಶರತ್ ಅಸ್ವಸ್ಥಗೊಂಡ ಹಿನ್ನೆಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಮೈಸೂರಿನ ನಿರ್ಗಮಿತ ಡಿಸಿ ಬಿ.ಶರತ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು - ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶರತ್
ತಿಂಗಳು ಕಳೆಯುವುದರೊಳಗೆ ವರ್ಗಾವಣೆ ಮಾಡಿದ ಹಿನ್ನೆಲೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮೈಸೂರಿನ ನಿರ್ಗಮಿತ ಡಿಸಿ ಬಿ.ಶರತ್ ಅವರು ಅಸ್ವಸ್ಥಗೊಂಡ ಹಿನ್ನೆಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

B sharat
ತಿಂಗಳು ಕಳೆಯುವುದರೊಳಗೆ ಸರ್ಕಾರ ಅವರನ್ನು ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶರತ್, ತಮ್ಮ ನಿವಾಸದಲ್ಲಿ ಅಸ್ವಸ್ಥಗೊಂಡಿದ್ದರು. ನಂತರ ಕುಟುಂಬಸ್ಥರು ತಕ್ಷಣ ಅವರನ್ನು ಕುವೆಂಪು ನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಅವಧಿ ಮುಗಿಯುವ ಒಳಗೆ ಮೈಸೂರಿನಿಂದ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಸಿಎಟಿ ಮೊರೆ ಹೋಗಿದ್ದ ಶರತ್ ಅವರ ಪ್ರಕರಣವನ್ನು ಸಿಎಟಿ ಅ. 23ಕ್ಕೆ ವಿಚಾರಣೆ ಮುಂದೂಡಿದೆ.