ಬಾಗೇಪಲ್ಲಿ:ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಇಲ್ಲದೆ ಓಡಾಡುವವರಿಗೆ ಪುರಸಭೆ ದಂಡ ವಿಧಿಸಲು ಮುಂದಾಗಿದೆ.
ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಮುಂದಾದ ಪುರಸಭೆ ಅಧಿಕಾರಿಗಳು
ಬಾಗೇಪಲ್ಲಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ಎತ್ತೆಚ್ಚ ಪುರಸಭೆ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಮುಂದಾಗಿದ್ದಾರೆ.
ಬಾಗೇಪಲ್ಲಿ
ತಾಲೂಕಿನಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪುರಸಭೆ ಮಾಸ್ಕ್ ಧರಿಸದವರಿಗೆ, ಸಾರ್ವಜನಿಕ ಪ್ರದೇಶದಲ್ಲಿ ಉಗುಳಿದವರಿಗೆ, ಎಲ್ಲೆಂದರಲ್ಲಿ ಮೂತ್ರ ವಿರ್ಸಜನೆ ಮಾಡಿದವರಿಗೆ, ಮಾಸ್ಕ್ ವಿಲೇವಾರಿ ಸರಿಯಾಗಿ ಮಾಡದಿದ್ದರೆ ಯಾವುದೇ ಮುಲಾಜಿಲ್ಲದೆ ದಂಡ ವಿಧಿಸಲು ಕ್ರಮ ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ ಇಂದು ಮಾಸ್ಕ್ ಧರಿಸದೆ ಇರುವ ಜನರಿಗೆ ಪುರಸಭೆ ಅಧಿಕಾರಿಗಳು ಸುಮಾರು 200 ರೂಪಾಯಿ ದಂಡ ವಿಧಿಸಿದರು. ತಾಲೂಕಿನಲ್ಲಿ ಹದ್ದಿನ ಕಣ್ಣಿಟ್ಟಿರುವ ಪೊಲೀಸ್ ಸಿಬ್ಬಂದಿ ಹಾಗೂ ಪುರಸಭೆ ಅಧಿಕಾರಿಗಳು ಜನರ ಮೇಲೆ ನಿಗಾ ವಹಿಸಿದ್ದಾರೆ.