ಬೆಂಗಳೂರು: ಡ್ರಗ್ಸ್ ವಿರುದ್ಧ ನಮ್ಮ ಸರ್ಕಾರದ ಕಾರ್ಯಾಚರಣೆ ಮುಂದುವರೆದಿದೆ. ಬೆಂಗಳೂರು ಹಾಗೂ ರಾಜ್ಯಾದ್ಯಂತ ಯಾವ ರೀತಿ ಡ್ರಗ್ಸ್ ಕಂಟ್ರೋಲ್ ಮಾಡಬಹುದು ಎನ್ನುವ ಬಗ್ಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ನಗರ ಪೊಲೀಸ್ ಆಯುಕ್ತರು ಹಾಗು ಸಿಸಿಬಿ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಡ್ರಗ್ಸ್ ವಿರುದ್ಧ ಸರ್ಕಾರದ ಕಾರ್ಯಾಚರಣೆ ಮುಂದುವರೆದಿದೆ: ಬಸವರಾಜ ಬೊಮ್ಮಾಯಿ - Benglure drugs control meeting
ಇಂದು ಹಿರಿಯ ಅಧಿಕಾರಿಗಳ ಜೊತೆ ಯಾವ ರೀತಿ ಡ್ರಗ್ಸ್ ನಿಯಂತ್ರಣ ಮಾಡಬಹುದು ಎನ್ನುವ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Basavaraj bommai
ಆರ್.ಟಿ. ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸುತ್ತಿದ್ದೇನೆ. ಡ್ರಗ್ಸ್ ವಿಚಾರ ಸಭೆಯಲ್ಲಿ ಚರ್ಚೆಯಾಗಲಿದೆ. ಯಾವ ರೀತಿ ಡ್ರಗ್ಸ್ ನಿಯಂತ್ರಣ ಮಾಡಬಹುದು ಎನ್ನುವ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದರು.
ಇಂದ್ರಜಿತ್ ಲಂಕೇಶ್ ಅವರನ್ನು ವಿಚಾರಣೆಗೆ ಕರೆದಿದ್ದೇವೆ. ಅವರ ಬಳಿ ಏನೆಲ್ಲ ಮಾಹಿತಿ ಇದೆ ಎಂದು ನೋಡೋಣ. ನಮ್ಮ ಬಳಿ ಕೂಡ ಕೆಲ ಮಾಹಿತಿ ಇವೆ. ಈ ಬಗ್ಗೆ ಚರ್ಚೆ ಮಾಡಿ ಒಂದು ನಿರ್ದಿಷ್ಟ ಸೂಚನೆಯನ್ನು ಸಿಸಿಬಿ ಅಧಿಕಾರಿಗಳಿಗೆ ನೀಡುತ್ತೇವೆ ಎಂದರು.
Last Updated : Aug 31, 2020, 12:17 PM IST