ಬೆಂಗಳೂರು: ಕೊಲೆ,ಸುಲಿಗೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಿ.ಆರ್. ಮದನ್ ಕುಮಾರ್‌ನನ್ನು ಗೂಂಡಾ ಕಾಯ್ದೆಯಡಿ ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.
19 ಪ್ರಕರಣಗಳಲ್ಲಿ ಭಾಗಿ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಮೇಲೆ ಗೂಂಡಾ ಕಾಯ್ದೆಯಡಿ ಬಂಧನ - Rowdysheeter Mdan kumar arrest
ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಸುಲಿಗೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿ ಶೀಟರ್ ಬಿ.ಆರ್. ಮದನ್ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ.
Rowdysheeter
ಈತನ ವಿರುದ್ಧ ಬಸವೇಶ್ವರ ನಗರ, ಸೋಲದೇವನಹಳ್ಳಿ, ರಾಜಾಜಿನಗರ, ಮಾಗಡಿರಸ್ತೆ, ಬ್ಯಾಟರಾಯನಪುರ ಮತ್ತು ಚಾಮರಾಜಪೇಟೆ ಪೊಲೀಸ್ ಠಾಣೆಗಳಲ್ಲಿ ಒಟ್ಟು 19 ಪ್ರಕರಣಗಳು ದಾಖಲಾಗಿವೆ.
ಕೊಲೆ, ಕೊಲೆ ಯತ್ನ, ಸುಲಿಗೆ, ದರೋಡೆ, ಹಲ್ಲೆ ಪ್ರಕರಣಗಳು, ಅಕ್ರಮಕೂಟ ಸೇರಿ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತ ಪ್ರಕರಣಗಳಲ್ಲಿ ಹಾಗೂ ಮಾದಕವಸ್ತು ಮಾರಾಟದಲ್ಲಿ ಭಾಗಿಯಾಗಿದ್ದಾನೆ. ಆ ಹಿನ್ನೆಲೆಯಲ್ಲಿ ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದಾರೆ.