ಕರ್ನಾಟಕ

karnataka

ETV Bharat / state

ದಾವೋಸ್​​ನಿಂದ ಬರುತ್ತಿದ್ದಂತೆ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ರು ಸಿಎಂ ಯಡಿಯೂರಪ್ಪ - ಸಂಪುಟ ವಿಸ್ತರಣೆ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ಸುದ್ದಿ

ಸಿಎಂ ಯಡಿಯೂರಪ್ಪ ದಾವೋಸ್​ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆ ಬಳಿಕ ಬೆಂಗಳೂರಿಗೆ ವಾಪಸಾಗಿದ್ದಾರೆ. ಅಲ್ಲಿಂದ ಬರುತ್ತಿದ್ದಂತೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. ಮೂರ್ನಾಲ್ಕು ದಿನಗಳೊಳಗಾಗಿ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಹೇಳಿದ್ದಾರೆ.

cabinet-expansion-within-3-4-days-said-cm-yediyurappa
ಸಿಎಂ ಯಡಿಯೂರಪ್ಪ ಹೇಳಿಕೆ

By

Published : Jan 24, 2020, 5:41 PM IST

ದೇವನಹಳ್ಳಿ: ಮೂರ್ನಾಲ್ಕು ದಿನಗಳ ಒಳಗಾಗಿ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ ಯಡಿಯೂರಪ್ಪ ಹೇಳಿಕೆ

ಸ್ವಿಟ್ಜರ್​​ಲ್ಯಾಂಡ್ ನ ದಾವೋಸ್​ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು,ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದರು. ಮೂರ್ನಾಲ್ಕು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುತ್ತೇವೆ. ನಾಳೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರ ಜೊತೆ ಮಾತನಾಡಿ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದರು.

ಈಗಾಗಲೇ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ಈ ಹಿಂದೆಯೇ ಮಾತುಕತೆ ನಡೆಸಲಾಗಿದೆ. ಆದರೆ ನಾಳೆಯೂ ಅಮಿತ್ ಶಾ ಅವರ ಜೊತೆ ಮಾತನಾಡಲು ಸಮಯ ಸಿಕ್ಕಿದ್ದು, ಪ್ರಮಾಣವಚನ ಕಾರ್ಯಕ್ರಮಕ್ಕೆ ದಿನಾಂಕ ನಿಗದಿ ಮಾಡುವುದಾಗಿ ಸಿಎಂ ಹೇಳಿದರು.

ಇನ್ನು, ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ಹಾಗೂ ಬೆಂಗಳೂರಿನಲ್ಲಿ ಬಂಡವಾಳ ಹೂಡಿಕೆಗೆ ಕಂಪನಿಗಳು ಬಹಳ ಆಸಕ್ತಿ ಹೊಂದಿವೆ. ದಾವೋಸ್ ಪ್ರವಾಸ ಸಾಕಷ್ಟು ಲಾಭ ತಂದಿದೆ ಎಂದರು.ಹೊರಡುವ ಮುನ್ನ 10 ದಿನ ಬೆಂಗಳೂರಿನಿಂದ ಹೊರ ಹೊಗಬೇಕು. ಇದರಿಂದ ಪ್ರಯೋಜನವೇನು ಎಂಬ ಯೋಚನೆ ಬಂದಿತ್ತು. ದಾವೋಸ್​ಗೆ ಹೋದ ಮೇಲೆ ಆತಂಕವೆಲ್ಲ ದೂರವಾಯಿತು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮತ್ತು ಜಿಫ್ ಸೆಕ್ರೆಟರಿ ಜೊತೆ ನಾನು 40 ಕ್ಕೂ ಹೆಚ್ಚು ಕಂಪನಿಗಳ ಜೊತೆ ವೈಯಕ್ತಿಕವಾಗಿ ಮಾತುಕತೆ ನಡೆಸಿದ್ದೇವೆ. ಬೆಂಗಳೂರು ಮತ್ತು ಕರ್ನಾಟಕದ ಬಗ್ಗೆ ವಿಶೇಷವಾದ ಚರ್ಚೆಯಾಗುತ್ತಿತ್ತು ಎಂದು ಸಿಎಂ ಮಾಹಿತಿ ನೀಡಿದರು.

ABOUT THE AUTHOR

...view details