ಕರ್ನಾಟಕ

karnataka

ETV Bharat / state

ಪಿಎಂ ಕೇರ್ಸ್ ನಿಧಿ ಸ್ಥಾಪನೆ ವಿರುದ್ಧ ಮತ್ತೆ ಕಾಂಗ್ರೆಸ್ ಅಪಸ್ವರ - ಪಿಎಂ ಕೇರ್ಸ್ ನಿಧಿ ಸ್ಥಾಪನೆ ವಿವಾದ

ಪಿಎಂ ಕೇರ್ಸ್ ನಿಧಿ ಸ್ಥಾಪಿಸುವ ಮುನ್ನಾ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯೇ ನಡೆದಿಲ್ಲ. ಸಭೆಯ ಕಾರ್ಯಸೂಚಿಯಲ್ಲಿ ನಿಧಿ ಸ್ಥಾಪನೆ ಬಗ್ಗೆ ಉಲ್ಲೇಖವಿಲ್ಲ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

ಕಾಂಗ್ರೆಸ್
ಕಾಂಗ್ರೆಸ್

By

Published : Aug 23, 2020, 2:58 PM IST

ಬೆಂಗಳೂರು: ಕೇಂದ್ರ ಸರ್ಕಾರದ ಪಿಎಂ ಕೇರ್ಸ್ ನಿಧಿ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಮ್ಮೆ ರಾಜ್ಯ ಕಾಂಗ್ರೆಸ್ ಅಪಸ್ವರ ಎತ್ತಿದೆ.

ಕಾಂಗ್ರೆಸ್ ಟ್ವೀಟ್

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ, ಪಿಎಂ ಕೇರ್ಸ್ ನಿಧಿ ಸ್ಥಾಪಿಸುವ ಮುನ್ನಾ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯೇ ನಡೆದಿಲ್ಲ. ಸಭೆಯ ಕಾರ್ಯಸೂಚಿಯಲ್ಲಿ ನಿಧಿ ಸ್ಥಾಪನೆ ಬಗ್ಗೆ ಉಲ್ಲೇಖವಿಲ್ಲ. ಕೇಂದ್ರ ಸರ್ಕಾರ ಇದು ಸಾರ್ವಜನಿಕ ಸೇವಾ ಟ್ರಸ್ಟ್‌ ಎಂದಿದೆ. ಆದರೆ ಎಂ.ಸಿ.ಎ, ಕೇಂದ್ರ ಸರ್ಕಾರ ಸ್ಥಾಪಿಸಿದ ನಿಧಿ ಎಂದು ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ಜನರಿಂದ ಮುಚ್ಚಿಡುತ್ತಿರುವುದೇನು? ಎಂದು ಪ್ರಶ್ನಿಸಿದೆ.

ನಿನ್ನೆ ಕೂಡ ಟ್ವೀಟ್ ಮಾಡಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೊರೊನಾ ಪರಿಹಾರಕ್ಕಾಗಿ ಮೋದಿ ಸ್ಥಾಪಿಸಿದ ಪಿಎಂ ಕೇರ್ಸ್ ಫಂಡ್ ನಿಧಿಗೆ ಅಪ್ಪ ಅಮ್ಮನೆ ಇಲ್ಲವಂತೆ. ಹಾಗಾದರೆ ಪ್ರಧಾನಿ ಮೋದಿ ಕೊರೊನಾ ಹೆಸರಲ್ಲಿ ಕಲೆಕ್ಷನ್ ಏಜೆಂಟ್ ಆಗಿದ್ದಾರಾ?, ಅಥವಾ ಕೊರೊನಾ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಿದ ದುಡ್ಡನ್ನು ಮನೆ ಖರ್ಚಿಗೆ ಬಳಸಿಕೊಳ್ಳುತ್ತಿದ್ದಾರಾ?. ಪಾರದರ್ಶಕತೆ ಯಾಕಿಲ್ಲ?, ಉತ್ತರಿಸಿ ಬಿಜೆಪಿ ನಾಯಕರೇ ಎಂದು ಗಂಭೀರ ಆರೋಪ ಮಾಡಿದ್ದರು.

ಪಿಎಂ ಕೇರ್ಸ್ ನಿಧಿ ಸ್ಥಾಪನೆ ವಿರುದ್ಧದ ಕಾಂಗ್ರೆಸ್ ಹೋರಾಟ ಟ್ವೀಟ್ ಮೂಲಕ ಇನ್ನೊಮ್ಮೆ ಮುಂದುವರಿದಿರುವುದು ಗೋಚರಿಸಿದೆ.

ABOUT THE AUTHOR

...view details