ಬೆಂಗಳೂರು: ಕೊಪ್ಪಳದಲ್ಲಿ ದೇಶದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ಆರಂಭಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಕೊಪ್ಪಳದಲ್ಲಿ ದೇಶದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ - Koppal toy cluster news
ಆತ್ಮ ನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ವೋಕಲ್ ಫಾರ್ ಲೋಕಲ್ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಪೂರಕವಾಗಿ ಕೊಪ್ಪಳದಲ್ಲಿ ಆಟಿಕೆ ಉತ್ಪಾದನಾ ಕ್ಲಸ್ಟರ್ ಆರಂಭಿಸಲಾಗುತ್ತಿದೆ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಸ್ವಾವಲಂಬಿ ರಾಷ್ಟ್ರ ನಿರ್ಮಾಣ ಮಾಡಬೇಕೆಂಬ ಪ್ರಧಾನಿ ನರೇಂದ್ರ ಮೋದಿಯವರ ವೋಕಲ್ ಫಾರ್ ಲೋಕಲ್ ಪರಿಕಲ್ಪನೆಗೆ ಅನುಗುಣವಾಗಿ ಮತ್ತು ಆರ್ಥಿಕತೆಗೆ ಹಾಗೂ ಉದ್ಯೋಗ ಸೃಷ್ಟಿಗೆ ಬಲ ತುಂಬಲು ದೇಶದಲ್ಲೇ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ಅನ್ನು ಕೊಪ್ಪಳದಲ್ಲಿ ಪ್ರಾರಂಭಿಸಲಾಗುತ್ತಿದೆ. ಇಲ್ಲಿ ದೇಶ-ವಿದೇಶಗಳ ಆಟಿಕೆ ತಯಾರಿಕೆಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮೂಲಕ ತಿಳಿಸಿದ್ದಾರೆ.
400 ಎಕರೆ ಪ್ರದೇಶ ವ್ಯಾಪ್ತಿಯಲ್ಲಿ ವಿಶೇಷ ಆರ್ಥಿಕ ವಲಯ ಸ್ಥಾಪಿಸಿ, ಉತ್ಕೃಷ್ಟ ಮೂಲಸೌಕರ್ಯದೊಂದಿಗೆ ಆಟಿಕೆ ತಯಾರಿಕಾ ಕ್ಲಸ್ಟರ್ ಆರಂಭಿಸುತ್ತಿದ್ದು, ಮುಂದಿನ 5 ವರ್ಷದಲ್ಲಿ 40 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ.