ಕರ್ನಾಟಕ

karnataka

ETV Bharat / state

ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್ ಮೊಕದ್ದಮೆ: ಜಿಲ್ಲಾಧಿಕಾರಿ ಎಚ್ಚರಿಕೆ - Coronavirus cases yadagiri

ಹೋಂ ಕ್ವಾರಂಟೈನ್​ನಲ್ಲಿ ಇರುವವರು ಹೊರಗಡೆ ತಿರುಗಾಡುವುದು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಜೊತೆಗೆ ಪುನಃ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಲಾಗುವುದು ಎಂದು ಯಾದಗಿರಿ ಡಿಸಿ ಎಂ. ಕೂರ್ಮಾ ರಾವ್ ಎಚ್ಚರಿಕೆ ನೀಡಿದ್ದಾರೆ.

 case register on who break home quarantine rules
case register on who break home quarantine rules

By

Published : Jun 10, 2020, 2:58 AM IST

ಯಾದಗಿರಿ: ಹೋಂ ಕ್ವಾರಂಟೈನ್​ನಲ್ಲಿ ಇರುವವರು ತಮ್ಮ ಅವಲೋಕನಾ ಅವಧಿ ಮುಗಿಯುವವರೆಗೆ ಕಡ್ಡಾಯವಾಗಿ ಮನೆಯಲ್ಲೇ ಇರಬೇಕು. ಹೊರಗಡೆ ತಿರುಗಾಡುವುದು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಜೊತೆಗೆ ಪುನಃ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾ ರಾವ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ಕಂಟೈನ್‍ಮೆಂಟ್ ಝೋನ್​ಗಳಾದ ವೆಂಕಟೇಶನಗರ (ಅಲ್ಲಿಪುರ ತಾಂಡಾ), ಕಂಚಗಾರಹಳ್ಳಿ ತಾಂಡಾ, ಚಾಮನಳ್ಳಿ ತಾಂಡಾಗಳಲ್ಲಿ ಕೈಗೊಂಡಿರುವ ಬಂದೋಬಸ್ತ್ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ನಿಯಂತ್ರಿತ ವಲಯದ ಎಲ್ಲಾ ಪ್ರವೇಶ ದ್ವಾರಗಳಲ್ಲೂ ಶಾಶ್ವತವಾಗಿ ತಡೆಗೋಡೆ ನಿರ್ಮಿಸಿ ನಾಕಾಬಂದಿ ಮಾಡಬೇಕು. ಒಂದೇ ಒಂದು ಪ್ರವೇಶ ಮತ್ತು ನಿರ್ಗಮನ ದ್ವಾರವಿರಬೇಕು. ಯಾವುದೇ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಾರದು. ಅಲ್ಲದೆ ನಿಯಂತ್ರಿತ ಪ್ರದೇಶದ ಯಾವುದೇ ವ್ಯಕ್ತಿ ಮನೆಯಿಂದ ಹೊರಗಡೆ ಬರಲು ಅವಕಾಶವಿಲ್ಲ. ಇಡೀ ಪ್ರದೇಶ ಸೀಲ್ ಡೌನ್ ಆಗಿರುವಂತೆ ನೋಡಿಕೊಳ್ಳುವ ಮತ್ತು ಕಟ್ಟುನಿಟ್ಟಿನ ಕಫ್ರ್ಯೂ ಜಾರಿ ಮಾಡುವ ಜವಾಬ್ದಾರಿ ಪೊಲೀಸ್ ಸಿಬ್ಬಂದಿಯದ್ದಾಗಿದೆ ಎಂದು ತಿಳಿಸಿದರು.

ನಿಯಂತ್ರಿತ ವಲಯದಲ್ಲಿ ಆರಂಭಿಸಿರುವ ಆರೋಗ್ಯ ಔಟ್ ಫೋಸ್ಟ್​ನಲ್ಲಿ ಒಬ್ಬರು ವೈದ್ಯರು ಹಾಗೂ ಸತತ ಐಇಸಿ ಪ್ರಚಾರದ ಜೊತೆಗೆ ದಿನಕ್ಕೆರಡು ಬಾರಿ ಜನಸಂಪರ್ಕಗಳ ಪತ್ತೆ ಕಾರ್ಯಕ್ಕೆ ಅಗತ್ಯ ಸಂಖ್ಯೆಯ ಕ್ಷೇತ್ರ ಸಿಬ್ಬಂದಿಯನ್ನು ನಿಯೋಜಿಸಬೇಕು. ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿಯಂತ್ರಿತ ವಲಯಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಘನತ್ಯಾಜ್ಯ ನಿರ್ವಹಣೆ ಮತ್ತು ಸೋಂಕು ನಿವಾರಕಗಳ ಸಿಂಪಡಣೆಯನ್ನು ಮಾಡಬೇಕು. ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಾರದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಯರಗೋಳ ಚೆಕ್ ಫೋಸ್ಟ್​ಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ವಾಹನಗಳ ಓಡಾಟ ಮತ್ತು ಪೊಲೀಸ್ ಬಂದೋಬಸ್ತ್ ಬಗ್ಗೆ ಮಾಹಿತಿ ಪಡೆದುಕೊಂಡರು.

ABOUT THE AUTHOR

...view details