ಕರ್ನಾಟಕ

karnataka

ETV Bharat / state

ಸಚಿವ ಸ್ಥಾನಕ್ಕೆ ಸಿ.ಟಿ. ರವಿ ರಾಜೀನಾಮೆ: ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಮುಂದಾದ ಸಿಎಂ - Karnataka cm bs yediyurappa news

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ವಹಿಸಿಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ಸಿ.ಟಿ. ರವಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.

Ct Ravi
Ct Ravi

By

Published : Oct 4, 2020, 9:40 AM IST

ಬೆಂಗಳೂರು: ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸುತ್ತಿರುವ ಸಿ.ಟಿ. ರವಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ರೆ ಸದ್ಯಕ್ಕೆ ರಾಜೀನಾಮೆ ಅಂಗೀಕರಿಸದಿರಲು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗ್ತಿದೆ.

ಶನಿವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದ ಸಚಿವ ಸಿ.ಟಿ. ರವಿ, ಪಕ್ಷದಲ್ಲಿ ಒಬ್ಬರಿಗೆ ಒಂದು ಹುದ್ದೆ ಎನ್ನುವ ನಿಯಮ ಇದೆ. ಹಾಗಾಗಿ ಪಕ್ಷದ‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ವಹಿಸಿಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಸಿ ಟಿ ರವಿ ಸಿಎಂಗೆ ತಿಳಿಸಿದ್ದಾರೆ.

ಆದರೆ ರವಿ ಅವರು ಸಚಿವ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಸಿಎಂ ಸದ್ಯಕ್ಕೆ ಅಂಗೀಕಾರ ಮಾಡಿಲ್ಲ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜೊತೆ ಮಾತುಕತೆ ನಡೆಸಿ ನಂತರ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಹೇಳಲಾಗ್ತಿದೆ.

ಗಾಂಧಿ ಜಯಂತಿ ನಂತರ ದೆಹಲಿಗೆ ತೆರಳುವುದಾಗಿ ತಿಳಿಸಿದ್ದ ಸಚಿವ ಸಿ.ಟಿ. ರವಿ, ನಾಳೆ‌ ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸಲಿದ್ದಾರೆ. ಅಕ್ಟೋಬರ್ 5 ಮತ್ತು 6 ರಂದು ದೆಹಲಿಯಲ್ಲಿ ನಡೆಯಲಿರುವ ಪಕ್ಷದ ಸಂಘಟನಾ ಸಭೆಯಲ್ಲಿ ಅವರು ಭಾಗಿಯಾಗಲಿದ್ದಾರೆ.

ABOUT THE AUTHOR

...view details